ಪುತ್ತೂರು : ಮಾದಕ ಪದಾರ್ಥ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿ ರೂ. 40 ಸಾವಿರ ಮೌಲ್ಯದ ಗಾಂಜಾವನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮುಕ್ರಂಪಾಡಿಯ ಬಸ್‌ತಂಗುದಾಣದಲ್ಲಿ ಗುರುವಾರ ನಡೆದಿದೆ.
ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಅವರ ಪುತ್ರ ಇಕ್ಬಾಲ್ ಪಿ ಯಾನೆ ಇಕ್ಕು(35) ಬಂಧಿತ ಆರೋಪಿ. ಆರೋಪಿಯು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಸ್‌ತಂಗುದಾಣವೊಂದರಲ್ಲಿ ರೂ. 40ಸಾವಿರ ಮೌಲ್ಯದ 1.020 ಕೆ.ಜಿ ತೂಕದ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇಟ್ಟುಕೊಂಡಿದ್ದ. ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಅನುಮಾನಾಸ್ಪದವಾಗಿ ನಿಂತಿದ್ದ ಈತನನ್ನು ಪರಿಶೀಲನೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.