ಹೊಸದಿಲ್ಲಿ: ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಲಾಯಂ ಸಿಂಗ್ ಯಾದವ್ ಅವರಿಗೆ ಗುರ್ಗಾಂವ್ ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
81 ವರ್ಷದ ಮುಲಾಯಂ ಸಿಂಗ್ ಯಾದವ್ ಅವರಿಗೆ ವಯೋ ಸಹಜ ಕಾರಣಗಳಿಂದ ಅನಾರೋಗ್ಯ ಕಾಡಿದೆ ಎಂದು ಮೂಲಗಳು ತಿಳಿಸಿದೆ.
ಇದನ್ನೂ ಓದಿ:ಎಚ್ಚರ ಅಗತ್ಯ..! ದೇಶದಲ್ಲಿ ಮತ್ತೆ ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ!
ಮುಲಾಯಂ ಸಿಂಗ್ ಅವರು ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಕೇಂದ್ರ ಸಚಿವರಾಗಿದ್ದ ಅವರು ರಕ್ಷಣಾ ಮಂತ್ರಿಯೂ ಆಗಿದ್ದರು.
ರಾಷ್ಟ್ರ ರಾಜಕಾರಣದ ಅನುಭವಿ ನಾಯಕ ಯಾದವ್ ಅವರು ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಳೆದ ವರ್ಷವೂ ಮೂತ್ರನಾಳದಲ್ಲಿ ಸೋಂಕಿನ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.