ನವದೆಹಲಿ: ಅನಾರೋಗ್ಯದಿಂದ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿರುವ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಭಾರತದಲ್ಲಿ ಇಸ್ಲಾಮಿಕ್ ರಾಜ್ಯ ಸ್ಥಾಪನೆ ಮಾಡುವುದೇ ಪಿಎಫ್ಐ ನ ಮೂಲ ಉದ್ದೇಶ : ಸಿ.ಟಿ.ರವಿ
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಗುರುಗ್ರಾಮ್ ಆಸ್ಪತ್ರೆಯ ಐಸಿಯುನಲ್ಲಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಭಾನುವಾರ ಮುಲಾಯಂ ಸಿಂಗ್ ಯಾದವ್ (82ವರ್ಷ) ಆರೋಗ್ಯ ಸ್ಥಿತಿ ಚಿಂತಾಜನಕವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಇಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯಾಧಿಕಾರಿ ಪ್ರಕಟಣೆ ವಿವರಿಸಿದೆ.
ಯಾದವ್ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಹರ್ಯಾಣ ಆಸ್ಪತ್ರೆಯ ತಜ್ಞ ವೈದ್ಯ ಡಾ.ಸುಶೀಲ್ ಕಠಾರಿಯಾ ಮೇಲುಸ್ತುವಾರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.