Advertisement

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ ಸ್ಥಿರ

02:45 PM Aug 09, 2020 | sudhir |

ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ.

Advertisement

ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇದಾಂತ ಆಸ್ಪತ್ರೆಯ ನಿರ್ದೇಶಕ ರಾಕೇಶ್‌ ಕಪೂರ್‌ ಶನಿವಾರ ಮಾತನಾಡಿ “ಹಿರಿಯ ನಾಯಕನಿಗೆ ಕೊರೊನಾ ಪತ್ತೆ ಪರೀಕ್ಷೆ ನಡೆಸಲಾಗಿದ್ದು, ಫ‌ಲಿತಾಂಶ ನೆಗೆಟಿವ್‌ ಬಂದಿದೆ. ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಹೇಳಿದ್ದಾರೆ.

ಮೂತ್ರ, ರಕ್ತ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಪುತ್ರ ಅಖೀಲೇಶ್‌ ಯಾದವ್‌, ಪತ್ನಿ ಡಿಂಪಲ್‌ ಯಾದವ್‌ ಶುಕ್ರವಾರವೇ ಆಸ್ಪತ್ರೆಗೆ ಭೇಟಿ ನೀಡಿ ಮುಲಾಯಂ ಆರೋಗ್ಯ ವಿಚಾರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next