Advertisement

ಮೂಲ್ಕಿ: ದ್ವಿಚಕ್ರ ವಾಹನಗಳ ಮುಖಾಮುಖಿ; ಓರ್ವ ವಿದ್ಯಾರ್ಥಿ ಸಾವು, ಇನ್ನೋರ್ವ ಗಂಭೀರ

09:21 PM Jun 25, 2022 | Team Udayavani |

ಮೂಲ್ಕಿ : ಇಲ್ಲಿ ಶನಿವಾರ ರಾತ್ರಿ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು,ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

Advertisement

ಮನೀಷ್ ಮೃತ ವಿದ್ಯಾರ್ಥಿಯಾಗಿದ್ದು,ಕೊಳಕ್ಕಾಡಿ ನಿವಾಸಿಯಾಗಿದ್ದು, ಮೂಲ್ಕಿಯ ಖಾಸಗಿ ಕಾಲೇಜ್ ಒಂದರಲ್ಲಿ ಅಂತಿಮ ಬಿಸಿಎ ವಿದ್ಯಾರ್ಥಿಯಾಗಿದ್ದಾನೆ. ಇನ್ನೊಂದು ಬೈಕ್ ನಲ್ಲಿದ್ದ ಅದೇ ಕಾಲೇಜಿನ ದೀಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಮನೀಷ್ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ದೀಕ್ಷಿತ್ ಕಾಲು ತುಂಡಾಗಿರುವ ಬಗ್ಗೆ ವರದಿಯಾಗಿದೆ.

ಸಂಚಾರಿ ಉತ್ತರ ವಲಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next