Advertisement

Kaup ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಹುಭಾಷಾ ನಟ ಪ್ರಕಾಶ್ ರೈ ಭೇಟಿ, ಕಾಮಗಾರಿ ವೀಕ್ಷಣೆ

02:58 PM Feb 06, 2024 | Team Udayavani |

ಕಾಪು: ಖ್ಯಾತ ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರೈ ಅವರು ಫೆ. 4 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದರು.

Advertisement

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾರಿಯಮ್ಮ ದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.

ನಂತರ ಭರದಿಂದ ಸಾಗುತ್ತಿರುವ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದ ನಟ ಪ್ರಕಾಶ್ ರೈ ಇಳಕಲ್ಲಿನ ಕಲಾತ್ಮಕ ಶೈಲಿಯ ಕೆತ್ತನೆಗಳ ಬಗ್ಗೆ ಮಾಹಿತಿಯನ್ನು ಪಡೆದರು. ದಕ್ಷಿಣ ಭಾರತದಲ್ಲೇ ವಿಶಿಷ್ಟವಾಗಿ ಮೂಡಿ ಬರುತ್ತಿರುವ ದೇಗುಲದ ಕಲಾ ಪ್ರಕಾರಗಳನ್ನು ಕಂಡು ಸಂತಸ ವ್ಯಕ್ತಪಡಿಸಿದರು.

ಜೀರ್ಣೋದ್ಧಾರ ಸಮಿತಿ ಆರ್ಥಿಕ ಸಮಿತಿ ಶೈಲಪುತ್ರಿ ತಂಡದ ಸಂಚಾಲಕ ರಾಧಾರಮಣ ಶಾಸ್ತ್ರೀ, ಗುತ್ತಿಗೆದಾರ ಪ್ರಶಾಂತ್ ಶೆಟ್ಟಿ ಕುಂದಾಪುರ ಮತ್ತು ಸ್ವಚ್ಛತಾ ಸಮಿತಿಯ ಮುಖ್ಯ ಸಂಚಾಲಕ ಅನಿತ್ ಶೆಟ್ಟಿ ಕಾಪು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next