Advertisement

ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಕೇಂದ್ರ ಸಚಿವರಿಗೆ ಮನವಿ ಸಲ್ಲಿಕೆ

08:34 PM Jul 12, 2019 | Team Udayavani |

ಮಡಿಕೇರಿ:ಅತಿ ಹೆಚ್ಚು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿರುವ ಮತ್ತು ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ಹೊಂದಿರುವ ಕೊಡಗು ಜಿಲ್ಲೆಗೆ ರೋಗಿಗಳ ತುರ್ತು ಚಿಕಿತ್ಸೆಗಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನ ವ್ಯಾಪಕವಾಗುತ್ತಿರುವಂತೆಯೇ ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ಡಾ.ಹರ್ಷವರ್ಧನ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

Advertisement

ಮಡಿಕೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಕೋರಿಕೊಂಡರು. ಈ ಸಂದರ್ಭ ಕೇಂದ್ರ ಸಚಿವರಾದ ಸದಾನಂದ ಗೌಡ ಪಿಯುಷ್‌ ಗೊಯಲ್‌, ಮಡಿಕೇರಿ ಶಾಸಕಅಪ್ಪಚ್ಚುರಂಜನ್‌, ಹಾಗೂ ಸಂಸದ ತೇಜಸ್ವಿ ಸೂರ್ಯ ಜತೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next