Advertisement

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

07:55 PM Dec 21, 2024 | Team Udayavani |

ಮೊಹಾಲಿ: ಪಂಜಾಬ್‌ನ ಮೊಹಾಲಿ ಜಿಲ್ಲೆಯ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡ ಕುಸಿದಿದ್ದು ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಶನಿವಾರ (ಡಿ21)ತಿಳಿಸಿದ್ದಾರೆ.

Advertisement

ಜಿಲ್ಲಾಡಳಿತ ರಕ್ಷಣ ಕಾರ್ಯಾಚರಣೆ ಆರಂಭಿಸಿದ್ದು, ಕಾರ್ಯಾಚರಣೆಯಲ್ಲಿ ಯಂತ್ರಗಳನ್ನು ಬಳಸಿಕೊಳ್ಳಲಾಗಿದ್ದು, ಅಗ್ನಿಶಾಮಕ ದಳದ ತಂಡವೂ ಇದೆ.

ಕಟ್ಟಡ ಕುಸಿದು ಬೀಳುವ ವೇಳೆ ದೊಡ್ಡ ಶಬ್ದ ಕೇಳಿಸಿತು ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ.ಕುಸಿತಕ್ಕೆ ಕಾರಣವೇನು ಎಂಬುದು ತತ್ ಕ್ಷಣಕ್ಕೆ ತಿಳಿದುಬಂದಿಲ್ಲ.

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಪರೀಕ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next