Advertisement
ಜ. 13 ರಂದು ಸಂಜೆ ಮುಲುಂಡ್ ಜಿಮಾVನದಲ್ಲಿ ನಡೆದ ಮುಲುಂಡ್ ಬಂಟ್ಸ್ ನ ವಾರ್ಷಿಕ ಕ್ರೀಡೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ರೀಡಾಕ್ಷೇತ್ರದಲ್ಲೂ ಮುಲುಂಡ್ ಬಂಟ್ಸ್ ನ ಸದಸ್ಯ ಬಾಂಧವರು ಉತ್ತಮ ಸಾಧನೆಗಳನ್ನು ಮಾಡುತ್ತಿರುವುದು ಅಭಿನಂದನೀಯವಾಗಿದೆ. ಸದಸ್ಯ ಬಾಂಧವರ ಕ್ರೀಡಾಸ್ಫೂರ್ತಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತೀ ವರ್ಷ ಕ್ರೀಡೋತ್ಸವವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ಮುಲುಂಡ್ ಪರಿಸರದ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿ ಸುತ್ತಿರುವುದು ಅಭಿಮಾನದ ಸಂಗತಿಯಾಗಿದೆ. ಸಂಘದ ಪ್ರತಿಯೊಂದು ಸಮಾಜಪರ ಕಾರ್ಯಗಳಿಗೆ ಸದಸ್ಯ ಬಾಂಧವರು, ದಾನಿಗಳ ಸಹಕಾರ, ಪ್ರೋತ್ಸಾಹ ಸದಾಯಿರಲಿ. ಸ್ಪರ್ಧೆ ಯಲ್ಲಿ ಸೋಲು-ಗೆಲುವು ಸಾಮಾನ್ಯ. ಅದನ್ನು ಸರಿಸಮಾನವಾಗಿ ಸ್ವೀಕರಿಸುವ ಗುಣ ನಮ್ಮಲ್ಲಿರ ಬೇಕು ಎಂದು ನುಡಿದು ವಿಜೇತ ಸ್ಪರ್ಧಿಗಳನ್ನು ಅಭಿನಂದಿಸಿದರು.
Related Articles
Advertisement
ಪುರುಷರ ಕಬಡ್ಡಿ ಸ್ಪರ್ಧೆಯಲ್ಲಿ ಸುರೇಶ್ ಶೆಟ್ಟಿ ಪೂಜಾ ತಂಡ ಪ್ರಥಮ, ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಮೋಹನ್ ಶೆಟ್ಟಿ ಮತ್ತು ತಂಡ ಪ್ರಥಮ ಬಹುಮಾನ ಪಡೆಯಿತು. ಮೋಹಿತ್ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಹೀರಾ ಶೆಟ್ಟಿ ಮತ್ತು ಪ್ರಮೀಳಾ ಶೆಟ್ಟಿ ಅವರು ಪ್ರಾರ್ಥನೆಗೈದರು. ಉಪಾಧ್ಯಕ್ಷ ವಸಂತ್ ಶೆಟ್ಟಿ ಪಲಿಮಾರು ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಉದಯ್ ಎನ್. ಶೆಟ್ಟಿ ವಂದಿಸಿದರು.
ಸದಸ್ಯ ಬಾಂಧವರಿಗೆ ವಯೋಮಿತಿಗೆ ಅನುಗು ಣವಾಗಿ ದಿನಪೂರ್ತಿ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯಿತು. ಪುರುಷ-ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಶಾಟ್‌ಪುಟ್, ವಿಶೇಷವಾಗಿ ಮಹಿಳೆಯರಿಗೆ ತ್ರೋಬಾಲ್, ಪುರುಷರು ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ, ಪುರುಷರಿಗೆ ಕಬ್ಬಡಿ, ಪುರುಷ ಮತ್ತು ಮಹಿಳೆಯರಿಗೆ ಲಗೋರಿ ಪಂದ್ಯಾಟಗಳನ್ನು ಆಯೋಜಿ ಸಲಾಗಿತ್ತು. ಕಾರ್ಯಕಾರಿ ಸಮಿತಿಯ ಸದಸ್ಯರು, ಉಪಸಮಿತಿಗಳ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು, ಮಾಜಿ ಅಧ್ಯಕ್ಷರುಗಳು ಪಾಲ್ಗೊಂಡು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿದರು.
ಸದಸ್ಯ ಬಾಂಧವರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿದರು. ಸಮಾರೋಪ ಸಮಾರಂಭದಲ್ಲಿ ಅತಿಥಿ-ಗಣ್ಯರು ಪಾಲ್ಗೊಂಡು ವಿಜೇತ ಸ್ಪರ್ಧಿಗಳಿಗೆ ಪ್ರಶಸ್ತಿ ಪ್ರದಾನಿಸಿ ಗೌರವಿಸಿ ಶುಭಹಾರೈಸಿದರು. ಕ್ರೀಡೋತ್ಸವದಲ್ಲಿ ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಭೋಜನ, ಸಂಜೆ ಚಹಾದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಚಿತ್ರ-ವರದಿ : ಸುಭಾಷ್ ಶಿರಿಯಾ