ಮುಂಬಯಿ: ಗುತ್ತಿನ ಮನೆ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ಹಾಗೂ ನಗರದ ಪ್ರತಿಷ್ಠಿತ ಜಾತೀಯ ಸಂಘಟನೆಗಳಲ್ಲಿ ಒಂದಾಗಿ ರುವ ಮುಲುಂಡ್ ಬಂಟ್ಸ್‌ನ ಹದಿಮೂರನೇ ವಾರ್ಷಿಕೋತ್ಸವ ಸಂಭ್ರಮವು ಡಿ. 15 ರಂದು ಅಪರಾಹ್ನ 2.30 ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಮುಲುಂಡ್ ಬಂಟ್ಸ್‌ನ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಹುಂತ್ರಿಕೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮೂಡಬಿದ್ರಿ ಆಳ್ವಾಸ್ ಎಜುಕೇಶನ್ ಫೌಂಡೇಷನ್ ಇದರ ಕಾರ್ಯಾಧ್ಯಕ್ಷ ಡಾ| ಮೋಹನ್ ಆಳ್ವ, ಗೌರವ ಅತಿಥಿಯಾಗಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ವಿ. ಶೆಟ್ಟಿ ಇನ್ನಕುರ್ಕಿಲ್‌ಬೆಟ್ಟು ಅವರು ಉಪಸ್ಥಿತರಿದ್ದು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷರುಗಳಾದ ಡಾ| ಸತ್ಯಪ್ರಕಾಶ್ ಶೆಟ್ಟಿ, ಎಸ್. ಬಿ. ಶೆಟ್ಟಿ, ವಿಶ್ವಸ್ಥರಾದ ಉದ್ಯಮಿ ರಮೇಶ್ ಶೆಟ್ಟಿ ಉಪಸ್ಥಿತರಿದ್ದರು.
ಸಂಸ್ಥೆಯ ಉಪಾಧ್ಯಕ್ಷ ವಸಂತ್ ಎನ್. ಶೆಟ್ಟಿ ಪಲಿಮಾರು, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವೇಣುಗೋಪಾಲ್ ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಉದಯ ಎನ್. ಶೆಟ್ಟಿ, ಗೌರವ ಕೋಶಾಧಿಕಾರಿ ಎ. ಹರ್ಷವರ್ಧನ ಶೆಟ್ಟಿ, ಜತೆ ಕಾರ್ಯದರ್ಶಿ ಸುಧಾಕರ ಆರ್. ಶೆಟ್ಟಿ, ಜತೆ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಸಾದ್ ಪಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನುತಾ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಮೋಹಿತ್ ಎಂ. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಪರಾಹ್ನ 2.30 ರಿಂದ ಸಂಸ್ಥೆಯ ಸದಸ್ಯ ಬಾಂಧವರಿಂದ ಮತ್ತು ಮಕ್ಕಳಿಂದ ಗಣೇಶ ವಂದನೆ, ಸದಸ್ಯ- ಸದಸ್ಯೆ ಯರಿಂದ ಸಾಂಸ್ಕೃತಿಕ ನೃತ್ಯ ವೈವಿಧ್ಯ ಸೇರಿದಂತೆ ವಿವಿಧ ವಿನೋದಾವಳಿಗಳು ನಡೆದವು. ವಿಶೇಷ ಆಕರ್ಷಣೆಯ ಅಂಗವಾಗಿ ಮುಲುಂಡ್ ಬಂಟ್ಸ್ ನ ಕಲಾವಿದರಿಂದ ಶ್ರೀ ಶಬರಿಮಲೈ ಅಯ್ಯಪ್ಪ ಸ್ವಾಮಿಯ ಮಹಿಮೆಯನ್ನು ಬಿಂಬಿಸುವ ಮಲೆತ್ತ ಮಹಿಮೆ ನಾಟಕ ಪ್ರದರ್ಶನಗೊಂಡು ನೆರೆದ ಸಾವಿರಾರು ಕಲಾಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾಯಿತು.
ಸಮಾರಂಭದಲ್ಲಿ ಸಂಸ್ಥೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಡಾ| ವಿಜಯ ಶೆಟ್ಟಿ, ಚಿತ್ರಕಲಾವಿದ ದೇವದಾಸ್ ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಅಲ್ಲದೆ ಸದಸ್ಯ ಬಾಂಧವರ ಪ್ರತಿಭಾವಂತ ಮಕ್ಕಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಲಾಯಿತು.
ಸಭಾ ಕಾರ್ಯಕ್ರಮವನ್ನು ಲಹರಿ ಎಸ್. ಶೆಟ್ಟಿ, ಶೋಣಿತ್ ಶೆಟ್ಟಿ ಅವರು ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ರೇಷ್ಮಾ ಶೆಟ್ಟಿ ಮತ್ತು ಶೂಷ್ಮಾ ಶೆಟ್ಟಿ ಅವರು ನಿರ್ವಹಿಸಿದರು. ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸದಸ್ಯ ಬಾಂಧವರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಮಾರಂಭದ ಕೊನೆಯಲ್ಲಿ ಭೋಜನದ ವ್ಯವಸ್ಥೆ ಆಯೋಜಿಸಲಾಗಿತ್ತು.
ಚಿತ್ರ-ವರದಿ: ಸುಭಾಷ್ ಶಿರಿಯಾ