ಮುಂಬಯಿ: ಮುಲುಂಡ್ ಬಂಟ್ಸ್ ಇದರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ ಮತ್ತು ಅರಸಿನ ಕುಂಕುಮ ಕಾರ್ಯಕ್ರಮವು ಆ. 24 ರಂದು ಮುಲುಂಡ್ ಪಶ್ಚಿಮದ ಆಶಾನಗರದಲ್ಲಿರುವ ಆರ್ಟ್ ಆಫ್ ಲೀವಿಂಗ್ ಟೆಂಪಲ್ ಆಫ್ ನಾಲೇಜ್ ಸಭಾಗೃಹದಲ್ಲಿ ನಡೆಯಿತು.
ಈ ಧಾರ್ಮಿಕ ಕಾರ್ಯಕ್ರಮವನ್ನು ಮುಲುಂಡ್ ಬಂಟ್ಸ್‌ನ ಉಪಾಧ್ಯಕ್ಷ ವಸಂತ್ ಎನ್. ಶೆಟ್ಟಿ ಪಲಿಮಾರು ಅವರು ದೀಪಪ್ರಜ್ವಲಿಸಿ ಉದ್ಘಾಟಿಸಿ ಶುಭಹಾರೈಸಿದರು. ಮುಲುಂಡ್ ಬಂಟ್ಸ್‌ನ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನುತಾ ಎಸ್. ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳಾ ವಿಭಾಗದ ಕಾರ್ಯಚಟುವಟಿಕೆಗಳನ್ನು ವಿವರಿಸಿ ಎಲ್ಲರ ಸಹಕಾರ ಬಯಸಿದರು.
ಮುಲುಂಡ್ ಬಂಟ್ಸ್‌ನ ಮಹಿಳಾ ವಿಭಾಗದ ವತಿಯಿಂದ ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕೋಶಾಧಿಕಾರಿ ಆಶಾ ವಿಠ್ಠಲ್ ರೈ ದಂಪತಿಯನ್ನು ಇದೇ ಸಂದರ್ಭದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಅರಸಿನ ಕುಂಕುಮ ಕಾರ್ಯಕ್ರಮದ ನಿಮಿತ್ತ ಮಹಿಳಾ ವಿಭಾಗದ ಸದಸ್ಯೆಯರಿಂದ ಭಜನೆ ಹಾಗೂ ವರಮಹಾಲಕ್ಷ್ಮೀ ಪೂಜೆ ನಡೆಯಿತು.
ಮಂಗಳ ಗೌರಿ ಕಾರ್ಯಕ್ರಮವನ್ನು ಪ್ರಿಯಾ ಕಲಂಬೆ ನೇತೃತ್ವದ ಸಬಿಗ್ರೂಪ್‌ನವರು ವಿಶೇಷ ರೀತಿಯಲ್ಲಿ ನಡೆಸಿಕೊಟ್ಟು ಎಲ್ಲರ ಪ್ರಶಂಸೆಗೆ ಪಾತ್ರರಾದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಲುಂಡ್ ಬಂಟ್ಸ್‌ನ ಮಾಜಿ ಅಧ್ಯಕ್ಷರುಗಳಾದ ಡಾ| ಸತ್ಯಪ್ರಕಾಶ್ ಶೆಟ್ಟಿ, ಎಸ್. ಬಿ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಉದಯ ಎನ್. ಶೆಟ್ಟಿ, ಗೌರವ ಕೋಶಾಧಿಕಾರಿ ಎ. ಹರ್ಷವರ್ಧನ್ ಶೆಟ್ಟಿ, ಜತೆ ಕಾರ್ಯದರ್ಶಿ ಸುಧಾಕರ ಆರ್. ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಸಾದ್ ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷ ಜಯ ಸೂಡ, ಭಜನ ಸಮಿತಿಯ ಶೇಖರ್ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ರತ್ನಾಕರ ವೈ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಮೋಹಿತ್ ಎಂ. ಶೆಟ್ಟಿ, ಯುವ ವಿಭಾಗದ ಮಾಜಿ ಕಾರ್ಯಾಧ್ಯಕ್ಷ ಅಲೋಕ್ ಶೆಟ್ಟಿ, ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಉಪ ಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆ ಲತಾ ಜಯರಾಮ್ ಶೆಟ್ಟಿ, ಥಾಣೆ ಬಂಟ್ಸ್ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಶೆಟ್ಟಿ, ಥಾಣೆ ಸ್ತ್ರೀ ಶಕ್ತಿ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾ ಪಿ. ಹೆಗ್ಡೆ, ಬೋಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸುಶೀಲಾ ಶೆಟ್ಟಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನುತಾ ಶೇಖರ್ ಶೆಟ್ಟಿ ಸ್ವಾಗತಿಸಿದರು. ಉಪ ಕಾರ್ಯಾಧ್ಯಕ್ಷೆ ವಿನೋದಾ ಚೌಟ ವಂದಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಆರತಿ ವೈ. ಶೆಟ್ಟಿ, ಗೌರವ ಕೋಶಾಧಿಕಾರಿ ಪೂರ್ಣಿಮಾ ಶೆಟ್ಟಿ, ಜತೆ ಕಾರ್ಯದರ್ಶಿ ರೂಪಾ ಪಿ. ಶೆಟ್ಟಿ, ಜತೆ ಕೋಶಾಧಿಕಾರಿ ಸುಷ್ಮಾ ಎ. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆಯರುಗಳಾದ ಪ್ರಭಾ ವಿ. ಶೆಟ್ಟಿ, ಡಾ| ಸತ್ಯಾ ಎಸ್. ಶೆಟ್ಟಿ, ಮಮತಾ ಎಂ. ಶೆಟ್ಟಿ ಸಹಕರಿಸಿದರು.