ಕಾಪು: ಓವರ್‌ಟೇಕ್ ಮಾಡುವ ಭರದಲ್ಲಿ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಮೂಳೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ.
Advertisement
ಉಡುಪಿಯಿಂದ ಮಂಗಳೂರು ಕಡೆಗೆ ವೇಗದಿಂದ ತೆರಳುತ್ತಿದ್ದ ಬಸ್ ಓವರ್ ಟೇಕ್ ಮಾಡುತ್ತಿದ್ದ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ, ಬಳಿಕ ಡಿವೈಡರ್ ಮೇಲೇರಿತ್ತು. ಬಸ್‌ನಲ್ಲಿ ನಲುವತ್ತಕ್ಕೂ ಅಧಿಕ ಪ್ರಯಾಣಿಕರು ಇದ್ದರು, ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.