Advertisement

ಮೂಳೂರು : ಅಡುಗೆ ಮನೆಯ ಮೇಲ್ಛಾವಣಿ ಕುಸಿತ, ಮಹಿಳೆಗೆ ಗಾಯ

03:14 PM Jun 26, 2021 | Team Udayavani |

ಕಾಪು: ಭಾರೀ ಗಾಳಿ ಮಳೆಯ ಪರಿಣಾಮ ಮೂಳೂರು ವೀರ ಮಾರುತಿ ಕಾಲೋನಿ ಯ ಮನೆಯೊಂದರ ಅಡುಗೆ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

Advertisement

ರತ್ನಾ ಪುತ್ರನ್ ಗಾಯಾಳು ಮಹಿಳೆಯಾಗಿದ್ದು, ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆಕ್ಷೇಪ

ಗಾಯಾಳುವನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿಸಿದರು.

ಮೇಲ್ಛಾವಣಿ ಕುಸಿದ ಪರಿಣಾಮ ಸುಮಾರು ಐವತ್ತು ಸಾವಿರಕ್ಕೂ ಅಧಿಕ ನಷ್ಟ ಆಗಿರಬಹುದೆಂದು ಅಂದಾಜಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next