Advertisement

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

07:24 PM Nov 28, 2021 | Team Udayavani |

ಮುಂಬಯಿ: ವೈನ್‌ ಬಾಟಲಿಯನ್ನು ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದ ಹಿರಿಯ ನಟಿಯೊಬ್ಬರ ಬ್ಯಾಂಕ್‌ ಖಾತೆಯಿಂದಲೇ ಸೈಬರ್‌ ಕಳ್ಳರು, 3 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.

Advertisement

ಮಹಾರಾಷ್ಟ್ರದ ಮುಂಬಯಿಯಲ್ಲಿ ನೆಲೆಸಿರುವ ಹಿಂದಿ ಧಾರಾವಾಹಿಯ ಹಿರಿಯ ನಟಿಯೊಬ್ಬರು ಮದುವೆಯಾಗುತ್ತಿರುವ ಸೋದರಳಿಯನಿಗೆ ಕೊಡಲೆಂದು, ಆನ್‌ಲೈನ್‌ನಲ್ಲಿ 4,800 ರೂಪಾಯಿ ಮೌಲ್ಯದ ವೈನ್‌ ಬಾಟಲಿ ಆರ್ಡರ್‌ ಮಾಡಿದ್ದರು.

ಆದರೆ ಅದು ಡೆಲಿವರಿಯಾಗದ ಹಿನ್ನೆಲೆಯಲ್ಲಿ ಅಲ್ಲಿದ್ದ ಸಂಖ್ಯೆಗೆ ಕರೆ ಮಾಡಿ, ಹಣವನ್ನು ಮರುಪಾವತಿಸಲು ಕೋರಿದ್ದಾರೆ. ಮರುಪಾವತಿಗೆ ನೀವು ನಮ್ಮ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸೈಬರ್‌ ಕಳ್ಳರು ಹೇಳಿದ್ದಾರೆ.

ಇದನ್ನೂ ಓದಿ:ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ

ಅದನ್ನು ನಂಬಿದ ನಟಿ, ಕ್ರೆಡಿಟ್‌ ಕಾರ್ಡ್‌ ಬಳಸಿ ನೋಂದಣಿ ಮಾಡಿಕೊಂಡಿದ್ದು, ಒಟಿಪಿಯನ್ನೂ ಹಂಚಿಕೊಂಡಿದ್ದಾರೆ. ಅವರ ಉಳಿತಾಯ ಖಾತೆಯಲ್ಲಿದ್ದ ಹಣವನ್ನೆಲ್ಲ ಡ್ರಾ ಮಾಡಿಕೊಂಡ ಕಳ್ಳರು, ಬಳಿಕ ಡೆಬಿಟ್‌ ಕಾರ್ಡ್‌ನಿಂದಲೂ ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 3.05 ಲಕ್ಷ ರೂಪಾಯಿ ದೋಚಿದ್ದಾರೆ. ಈ ವಿಚಾರವಾಗಿ ನಟಿ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next