Advertisement

ಮುಂಬಯಿ : ಐಷಾರಾಮಿ ಹೊಟೇಲ್‌ವೊಂದರಲ್ಲಿ ಭಾರಿ ಅಗ್ನಿ ಅವಘಡ 

10:37 AM Dec 20, 2018 | |

ಮುಂಬಯಿ: ನಗರದ ದಕ್ಷಿಣ ಭಾಗದಲ್ಲಿರುವ ಐಷಾರಾಮಿ ಹೊಟೇಲ್‌ವೊಂದರಲ್ಲಿ ಗುರುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ.

Advertisement

ನಾರಿಮನ್‌ ಪಾಯಿಂಟ್‌ನಲ್ಲಿರುವ ಟ್ರಿಡೆಂಟ್‌ ಹೊಟೇಲ್‌ನ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ವ್ಯಾಪಿಸಿದೆ. 

ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. 2 ನೇ ಹಂತದ ಬೆಂಕಿ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಅಂಧೇರಿಯಲ್ಲಿ  ಸೋಮವಾರ ಇಎಸ್‌ಐಸಿ ಕಾಮ್‌ನಗರ್‌ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 9 ಮಂದಿ ಸಾವನ್ನಪ್ಪಿ 175 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next