Advertisement

ಕುಡಿದು ವಾಹನ ಚಲಾಯಿಸಿ ಪೊಲೀಸರ ನಿಂದನೆ: ನಟಿ ಕಾವ್ಯಾ ಥಾಪರ್ ಬಂಧನ

05:06 PM Feb 18, 2022 | Team Udayavani |

ಮುಂಬಯಿ: ಪಶ್ಚಿಮ ಉಪನಗರ ಜುಹುದಲ್ಲಿ ಮದ್ಯದ ಅಮಲಿನಲ್ಲಿ ಚಾಲನೆ ಮಾಡುವಾಗ ನಿಂತಿದ್ದ ವಾಹನಕ್ಕೆ ತನ್ನ ಕಾರನ್ನು ಢಿಕ್ಕಿ ಹೊಡೆದ ನಂತರ ಪೊಲೀಸ್ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಮತ್ತು ಹಲ್ಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ನಟಿ ಕಾವ್ಯಾ ಥಾಪರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

Advertisement

ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿರುವ 26 ವರ್ಷದ ನತಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುವಾರ ನಸುಕಿನ 1 ಗಂಟೆ ಸುಮಾರಿಗೆ ಜುಹುವಿನ ಜೆ ಡಬ್ಲ್ಯೂ ಮ್ಯಾರಿಯಟ್ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಥಾಪರ್ ಅವರು ಮದ್ಯದ ಅಮಲಿನಲ್ಲಿ ಎಸ್‌ಯುವಿ ಚಲಾಯಿಸುತ್ತಿದ್ದರು ಎಂದು ಅವರು ಹೇಳಿದರು. ಥಾಪರ್ ಕಾರಿನ ನಿಯಂತ್ರಣ ಕಳೆದುಕೊಂಡು ನಿಂತಿದ್ದ ವಾಹನದ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ದಾರಿಹೋಕರೊಬ್ಬರು ಘಟನೆಯನ್ನು ಗಮನಿಸಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದು, ನಂತರ ಜುಹು ಪೊಲೀಸರ ತಂಡವು ಸ್ಥಳಕ್ಕೆ ಧಾವಿಸಿತು ಎಂದು ಅವರು ಹೇಳಿದರು.

ಪೊಲೀಸ್ ಸಿಬ್ಬಂದಿಯನ್ನು ನೋಡಿದ ನಟಿ ಅವರನ್ನು ಅವಾಚ್ಯವಾಗಿ ನಿಂದಿಸಲು ಪ್ರಾರಂಭಿಸಿ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Advertisement

ಕಾವ್ಯಾ ಥಾಪರ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next