Advertisement
ದೇವಸ್ಥಾನದ ಪ್ರಧಾನ ಅರ್ಚಕ ವಿದ್ವಾನ್ ಅರವಿಂದ ಬನ್ನಿಂತಾಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಸೆ. 13 ರಂದು ಬೆಳಗ್ಗೆ 9 ರಿಂದ ಶ್ರೀ ಗಣೇಶ ಪ್ರತಿಷ್ಠಾಪನೆ, ಗಣಹೋಮ, ಮಹಾಪೂಜೆ ನಡೆಯಿತು. ಆ ದಿನದ ಸೇವಾರ್ಥಿಗಳಾಗಿ ಸಂಘದ ಯುವ ವಿಭಾಗ ಮತ್ತು ನವಿಮುಂಬಯಿ ಪ್ರಾದೇಶಿಕ ಸಮಿತಿಯವರು ಸಹ ಕರಿಸಿದರು. ಮಾತೃಭೂಮಿ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿ ವಿಶೇ ಷವಾಗಿ ಪ್ರಾಯೋಜಕತ್ವ ವಹಿಸಿತ್ತು.
Related Articles
Advertisement
ಸಂಜೆ 4 ರಿಂದ ಸಂಘದ ಡೊಂಬಿವಲಿ ಪ್ರಾದೇಶಿಕ ಸಮಿತಿಯವರಿಂದ ಭಜನ ಕಾರ್ಯಕ್ರಮ ನಡೆಯಲಿದೆ.
ಸೆ. 16 ರಂದು ಬೆಳಗ್ಗೆ 10 ರಿಂದ ಗಣಹೋಮ, ಮಹಾಪೂಜೆ ನೆರವೇರಲಿದ್ದು, ಸೇವಾರ್ಥಿಗಳಾಗಿ ಸಂಘದ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ ಹಾಗೂ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯವರು ಸಹಕರಿಸಲಿದ್ದಾರೆ. ಸೆ. 17 ರಂದು ಬೆಳಗ್ಗೆ 10 ರಿಂದ ಸಾರ್ವಜನಿಕ ಗಣಹೋಮ ಮತ್ತು ಮಹಾಪೂಜೆ ಜರಗಲಿದೆ. ದಿನದ ಸೇವಾರ್ಥಿಗಳಾಗಿ ಸಂಘದ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿ ಸಹಕರಿಸಲಿದ್ದಾರೆ.
ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಮಧ್ಯಾಹ್ನ 1 ರಿಂದ ಹೂಕಟ್ಟುವ ಸ್ಪರ್ಧೆ, ಸಂಗೀತ ಕುರ್ಚಿ, ಬಲೂನ್ ಊದುವುದು ಇನ್ನಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಪರಾಹ್ನ 2 ರಿಂದ ಕೈರಬೆಟ್ಟು ವಿಶ್ವನಾಥ್ ಭಟ್ ಅವರಿಂದ ಶ್ಯಮಂತಕೋಪಾಖ್ಯಾನ ಹರಿಕಥಾ ಕಾಲಕ್ಷೇಪ ನಡೆಯಲಿದೆ. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಗುವುದು.
ಬಳಿಕ ಬಂಟರ ಸಂಘ ಮಹಿಳಾ ವಿಭಾಗದಿಂದ ಭಜನ ಕಾರ್ಯಕ್ರಮ ನಡೆಯಲಿದೆ. ಸೇವಾರ್ಥಿಗಳಾಗಿ ಸಂಘದ ಸಿಟಿ ಪ್ರಾದೇಶಿಕ ಸಮಿತಿ ಹಾಗೂ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯವರು ಸಹಕರಿ ಸಲಿದ್ದಾರೆ.
ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಂಘದ ಸದಸ್ಯ ಬಾಂಧವರು, ಸಮಾಜ ಬಾಂಧವರು, ಭಕ್ತಾಭಿಮಾನಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.