Advertisement

Threat: ಬಾಬಾ ಸಿದ್ದಿಕ್‌ನಂತೆ ನಿಮ್ಮನ್ನೂ ಕೊಲ್ಲುತ್ತೇನೆ… ಸಿಎಂ ಯೋಗಿಗೆ ಬೆದರಿಕೆ ಸಂದೇಶ

10:19 AM Nov 03, 2024 | Team Udayavani |

ಮುಂಬೈ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರಂತೆಯೇ ನಿಮ್ಮನ್ನು ಕೊಲ್ಲಲಾಗುವುದು ಎಂದು ಮುಂಬೈ ಪೊಲೀಸರಿಗೆ ಶನಿವಾರ(ನ.2) ಸಂಜೆ ಬೆದರಿಕೆ ಸಂದೇಶವೊಂದು ಬಂದಿದೆ ಎನ್ನಲಾಗಿದೆ.

Advertisement

ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದೆ ಎನ್ನಲಾಗಿದೆ.

ಇತ್ತ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಮುಂಬೈ ಪೊಲೀಸರು ಸಂದೇಶ ಕಳುಹಿಸಿದ ವ್ಯಕ್ತಿಯ ಜಾಡು ಪತ್ತೆಹಚ್ಚುವ ಕಾರ್ಯ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನೊಂದೆಡೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,

ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ, ಕೊಲೆ ಬೆದರಿಕೆಗಳು ಹೆಚ್ಚಾಗಿದ್ದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ, ದಿನ ಬೆಳಗಾದರೆ, ವಿಮಾನ, ಆಸ್ಪತ್ರೆ, ಶಾಲಾ ಕಾಲೇಜು ಸೇರಿದಂತೆ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುತ್ತವೆ, ಇದರ ಬೆನ್ನಲೇ ಇದೀಗ ಹಿರಿಯ ವ್ಯಕ್ತಿಗಳನ್ನು ಗುರಿಯಾಗಿಸಿ ಬೆದರಿಕೆ ಸಂದೇಶಗಳು ಬರತೊಡಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next