Advertisement
ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಮೇ ತಿಂಗಳಲ್ಲಿ ಸೋಂಕಿನ ಪ್ರಮಾಣ ಶೇ. 100 ಏರಿಕೆಯಾಗಿದೆ. ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆ ನಗರದಾದ್ಯಂತ ಕೊರೊನಾ ಲಕ್ಷಣವಿರುವ ಪ್ರಕರಣಗಳ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ಹಾಗಾಗಿ ಎಲ್ಲೆಡೆ ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸಬೇಕೆಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೊಪೆ ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆಯಿಂದ ಬುಧವಾರ ಬೆಳಗ್ಗೆಯವರೆಗೆ ದೇಶದಲ್ಲಿ 2,745 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 18,386ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 6 ಸೋಂಕಿತರು ಸಾವನ್ನಪ್ಪಿದ್ದಾರೆ.ದೆಹಲಿಯಲ್ಲಿ ಬುಧವಾರ 1,354 ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.7.64ಕ್ಕೆ ಏರಿಕೆಯಾಗಿದೆ.
Related Articles
3 ಬೇರೆ ಬೇರೆ ಕೊರೊನಾ ಲಸಿಕೆಗಳ ಡೋಸ್ ಪಡೆಯುವುದರಿಂದಲೂ ಕೊರೊನಾವನ್ನು ಉತ್ತಮವಾಗಿ ನಿಯಂತ್ರಿಸಬಹುದು ಎಂದು ಚೀನಾದ ವಿಜ್ಞಾನಿಗಳು ತಿಳಿಸಿದ್ದಾರೆ. ಮೂರೂ ಎಂಆರ್‌ಎನ್‌ಎ ಲಸಿಕೆಯ ಡೋಸ್ ಪಡೆಯುವುದು ಶೇ.96 ಪರಿಣಾಮಕಾರಿಯಾಗಿರುತ್ತದೆ. ಹಾಗೆಯೇ ಎರಡು ವೆಕ್ಟಾರ್ ಡೋಸ್ ಪಡೆದು, ಎಂಆರ್‌ಎನ್‌ಎ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ಪಡೆಯುವುದು ಶೇ.88 ಪರಿಣಾಮಕಾರಿಯಾಗಿರುತ್ತದೆ. ಲಸಿಕೆಯ ಡೋಸ್ ಹೆಚ್ಚಾದಂತೆ ಪ್ರತಿಕಾಯಗಳ ಪ್ರಮಾಣ ಹೆಚ್ಚುತ್ತದೆ ಎಂದು ತಿಳಿಸಲಾಗಿದೆ.
Advertisement