Advertisement

ಮುಂಬೈನಲ್ಲಿ ಮತ್ತೆ ಕೋವಿಡ್ ಏರಿಕೆ; ಪಾಸಿಟಿವಿಟಿ ದರ ಶೇ.8.4ಕ್ಕೆ ಏರಿಕೆ

05:17 PM Jun 02, 2022 | Team Udayavani |

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಾಣಲಾರಂಭಿಸಿದೆ. ಬುಧವಾರ ಅಲ್ಲಿ 739 ಕೊರೊನಾ ಪ್ರಕರಣಗಳು ದೃಢವಾಗಿದ್ದು, ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.8.4ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 3500ಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 2,970 ಪ್ರಕರಣಗಳು ಮುಂಬೈನದ್ದೇ ಆಗಿವೆ.

Advertisement

ಏಪ್ರಿಲ್‌ ತಿಂಗಳಿಗೆ ಹೋಲಿಸಿದರೆ ಮೇ ತಿಂಗಳಲ್ಲಿ ಸೋಂಕಿನ ಪ್ರಮಾಣ ಶೇ. 100 ಏರಿಕೆಯಾಗಿದೆ. ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆ ನಗರದಾದ್ಯಂತ ಕೊರೊನಾ ಲಕ್ಷಣವಿರುವ ಪ್ರಕರಣಗಳ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ಹಾಗಾಗಿ ಎಲ್ಲೆಡೆ ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸಬೇಕೆಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್‌ ತೊಪೆ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಸದ್ಯ 3,500 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 2,500 ಪ್ರಕರಣಗಳು ಮುಂಬೈನಲ್ಲೇ ಇವೆ. ಎಂಎನ್‌ಎಸ್‌ ಪಕ್ಷದ ಮುಖ್ಯಸ್ಥ ರಾಜ್‌ ಠಾಕ್ರೆ ಅವರಿಗೆ ಬುಧವಾರ ಮೂಳೆಯ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಆದರೆ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆ ಶಸ್ತ್ರಚಿಕಿತ್ಸೆಯನ್ನು ಮುಂದೂಡಲಾಗಿದೆ.

ದೇಶಾದ್ಯಂತ 2,700 ಪ್ರಕರಣ
ಮಂಗಳವಾರ ಬೆಳಗ್ಗೆಯಿಂದ ಬುಧವಾರ ಬೆಳಗ್ಗೆಯವರೆಗೆ ದೇಶದಲ್ಲಿ 2,745 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 18,386ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 6 ಸೋಂಕಿತರು ಸಾವನ್ನಪ್ಪಿದ್ದಾರೆ.ದೆಹಲಿಯಲ್ಲಿ ಬುಧವಾರ 1,354 ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.7.64ಕ್ಕೆ ಏರಿಕೆಯಾಗಿದೆ.

ಲಸಿಕೆ ಮಿಶ್ರಣದಿಂದಲೂ ಉತ್ತಮ ಪರಿಣಾಮ
3 ಬೇರೆ ಬೇರೆ ಕೊರೊನಾ ಲಸಿಕೆಗಳ ಡೋಸ್‌ ಪಡೆಯುವುದರಿಂದಲೂ ಕೊರೊನಾವನ್ನು ಉತ್ತಮವಾಗಿ ನಿಯಂತ್ರಿಸಬಹುದು ಎಂದು ಚೀನಾದ ವಿಜ್ಞಾನಿಗಳು ತಿಳಿಸಿದ್ದಾರೆ. ಮೂರೂ ಎಂಆರ್‌ಎನ್‌ಎ ಲಸಿಕೆಯ ಡೋಸ್‌ ಪಡೆಯುವುದು ಶೇ.96 ಪರಿಣಾಮಕಾರಿಯಾಗಿರುತ್ತದೆ. ಹಾಗೆಯೇ ಎರಡು ವೆಕ್ಟಾರ್‌ ಡೋಸ್‌ ಪಡೆದು, ಎಂಆರ್‌ಎನ್‌ಎ ಲಸಿಕೆಯನ್ನು ಬೂಸ್ಟರ್‌ ಡೋಸ್‌ ಆಗಿ ಪಡೆಯುವುದು ಶೇ.88 ಪರಿಣಾಮಕಾರಿಯಾಗಿರುತ್ತದೆ. ಲಸಿಕೆಯ ಡೋಸ್‌ ಹೆಚ್ಚಾದಂತೆ ಪ್ರತಿಕಾಯಗಳ ಪ್ರಮಾಣ ಹೆಚ್ಚುತ್ತದೆ ಎಂದು ತಿಳಿಸಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next