Advertisement
ರಾಜ್ಯದಲ್ಲಿ ಜ. 16ರಿಂದ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದ್ದು, ಸದ್ಯ ಮುಂಚೂಣಿ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು ಮತ್ತು 45 ವರ್ಷ ಪ್ರಾಯ ಮೆಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.
Related Articles
Advertisement
ಸೋಂಕಿನಿಂದ 63 ಮಂದಿ ಸಾವನ್ನಪ್ಪಿದ್ದು, ಜಿಲ್ಲೆಯಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 5,769ಕ್ಕೆ ಏರಿಕೆಯಾಗಿದೆ. ಸಾವುಗಳ ಪೈಕಿ 3,604 ಮಂದಿ ನಾಗಪುರ ನಗರಕ್ಕೆ ಸೇರಿದವ ರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರವಿವಾರ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಂದ 3,240 ಮಂದಿ ಸೋಂಕಿತರು ಗುಣಮುಖ ರಾಗಿ ಬಿಡುಗಡೆ ಹೊಂದಿದ್ದು, ಈ ವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2,17,313ಕ್ಕೆ ತಲುಪಿದೆ. ಜಿಲ್ಲೆಯಲ್ಲಿ ರವಿವಾರ 26,007 ಮಂದಿಯ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ಈ ವರೆಗೆ ಪರೀಕ್ಷೆಗೆ ಒಳಗಾದವರ ಸಂಖ್ಯೆ 1,87,244ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧೀಕಾರಿಗಳು ತಿಳಿಸಿದ್ದಾರೆ.
ಕೋವಿಡ್: ಥಾಣೆಯಲ್ಲಿ 5,754 ಕೇಸುಗಳು ದೃಢ :
ಥಾಣೆ: ಜಿಲ್ಲೆಯಲ್ಲಿ ಮತ್ತೆ 5,754 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 3,73,364ಕ್ಕೆ ಏರಿಕೆಯಾಗಿದೆ. 24 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 6,688ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ ಶೇ. 1.79 ಆಗಿದೆ. 3,13,113 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ಜಿಲ್ಲೆಯಲ್ಲಿ 53,563 ಸಕ್ರಿಯ ಪ್ರಕರಣಗಳು ಇವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ನೆರೆಯ ಪಾಲ್ಘರ್ ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸೋಂಕಿನ ಸಂಖ್ಯೆ 57,742ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,255ಕ್ಕೆ ಹೆಚ್ಚಳವಾಗಿದೆ.