Advertisement
ಮುಂಬೈನಲ್ಲಿ 20,181 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಒಂದೇ ದಿನದಲ್ಲಿ ಶೇಕಡಾ 33ರಷ್ಟು ಸೋಂಕು ಪ್ರಕರಣಗಳು ಹೆಚ್ಚಾಗಿದೆ. ನಾಲ್ಕು ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
Related Articles
Advertisement
ಲಾಕ್‌ಡೌನ್ ಬಗ್ಗೆ ಮಾತನಾಡಿದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ, “ಸರ್ಕಾರವು ಮುಂಬೈ ಪರಿಸ್ಥಿತಿಯನ್ನು ಬಹಳ ಎಚ್ಚರಿಕೆಯಿಂದ ಅಧ್ಯಯನ ಮಾಡುತ್ತಿದೆ, ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.
ವೈದ್ಯಕೀಯ ಆಮ್ಲಜನಕದ ಬೇಡಿಕೆಯು ದಿನಕ್ಕೆ 800 ಮೆಟ್ರಿಕ್ ಟನ್‌ಗಳನ್ನು ದಾಟಿದಾಗ ಅಥವಾ ಶೇಕಡಾ 40 ಕ್ಕಿಂತ ಹೆಚ್ಚು ಆಸ್ಪತ್ರೆ ಹಾಸಿಗೆಗಳು ಕೋವಿಡ್ ರೋಗಿಗಳಿಗೆ ಬೇಕಾದಾಗ ಲಾಕ್‌ಡೌನ್ ಅಥವಾ ಲಾಕ್‌ಡೌನ್ ತರಹದ ನಿರ್ಬಂಧಗಳನ್ನು ಪರಿಗಣಿಸಲಾಗುವುದು ಎಂದು ಆರೋಗ್ಯ ಇಲಾಖೆ ಈ ಹಿಂದೆ ಹೇಳಿತ್ತು. ಸೋಂಕು ಪ್ರಕರಣಗಳ ದೈನಂದಿನ ಏರಿಕೆ 20,000 ದಾಟಿದಾಗ ಅದನ್ನು ಪರಿಗಣಿಸಲಾಗುವುದು ಎಂದು ಬೃಹನ್ ಮುಂಬೈ ಕಾರ್ಪೊರೇಷನ್ ಹೇಳಿದೆ.