Advertisement

ಮುಂಬೈನಲ್ಲಿ ಒಂದೇ ದಿನ 20 ಸಾವಿರ ಸೋಂಕು ಪ್ರಕರಣ: ಲಾಕ್ ಡೌನ್ ಬಹುತೇಕ ಖಚಿತ

08:57 AM Jan 07, 2022 | Team Udayavani |

ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಎಂದೇ ಕರೆಯಲ್ಪಡುವ ಮುಂಬೈ ನಗರದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಒಂದೇ ದಿನ 20 ಸಾವಿರಕ್ಕೂ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ಲಾಕ್ ಡೌನ್ ಬಹುತೇಕ ಖಚಿತ ಎನ್ನಲಾಗಿದೆ.

Advertisement

ಮುಂಬೈನಲ್ಲಿ 20,181 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಒಂದೇ ದಿನದಲ್ಲಿ ಶೇಕಡಾ 33ರಷ್ಟು ಸೋಂಕು ಪ್ರಕರಣಗಳು ಹೆಚ್ಚಾಗಿದೆ. ನಾಲ್ಕು ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಹೊಸ ಪ್ರಕರಣಗಳಲ್ಲಿ, 85 ಪ್ರತಿಶತವು ಯಾವುದೇ ರೋಗಲಕ್ಷಣಗಳನ್ನು ಹೊಂದಿಲ್ಲ. ಆದರೆ 1,170 ಕೋವಿಡ್ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು 106 ಜನರು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ಕರಾವಳಿಯಲ್ಲಿ ಇಂದಿನಿಂದ ವಾರಾಂತ್ಯ ಕರ್ಫ್ಯೂ : ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ಅವಕಾಶ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಆರೋಗ್ಯ ಸಚಿವರು, ಆರೋಗ್ಯ ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳ ನಡುವಿನ ಸಭೆಯಲ್ಲಿ ಲಾಕ್‌ಡೌನ್ ವಿಷಯವನ್ನು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

ಲಾಕ್‌ಡೌನ್ ಬಗ್ಗೆ ಮಾತನಾಡಿದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ, “ಸರ್ಕಾರವು ಮುಂಬೈ ಪರಿಸ್ಥಿತಿಯನ್ನು ಬಹಳ ಎಚ್ಚರಿಕೆಯಿಂದ ಅಧ್ಯಯನ ಮಾಡುತ್ತಿದೆ, ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

ವೈದ್ಯಕೀಯ ಆಮ್ಲಜನಕದ ಬೇಡಿಕೆಯು ದಿನಕ್ಕೆ 800 ಮೆಟ್ರಿಕ್ ಟನ್‌ಗಳನ್ನು ದಾಟಿದಾಗ ಅಥವಾ ಶೇಕಡಾ 40 ಕ್ಕಿಂತ ಹೆಚ್ಚು ಆಸ್ಪತ್ರೆ ಹಾಸಿಗೆಗಳು ಕೋವಿಡ್ ರೋಗಿಗಳಿಗೆ ಬೇಕಾದಾಗ ಲಾಕ್‌ಡೌನ್ ಅಥವಾ ಲಾಕ್‌ಡೌನ್ ತರಹದ ನಿರ್ಬಂಧಗಳನ್ನು ಪರಿಗಣಿಸಲಾಗುವುದು ಎಂದು ಆರೋಗ್ಯ ಇಲಾಖೆ ಈ ಹಿಂದೆ ಹೇಳಿತ್ತು. ಸೋಂಕು ಪ್ರಕರಣಗಳ ದೈನಂದಿನ ಏರಿಕೆ 20,000 ದಾಟಿದಾಗ ಅದನ್ನು ಪರಿಗಣಿಸಲಾಗುವುದು ಎಂದು ಬೃಹನ್‌ ಮುಂಬೈ ಕಾರ್ಪೊರೇಷನ್ ಹೇಳಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next