Advertisement

ಮುಂಬೈ: ಐಸಿಯುನಲ್ಲಿದ್ದ ಕೋವಿಡ್ 19 ಸೋಂಕಿತೆಗೆ ಲೈಂಗಿಕ ಕಿರುಕುಳ, ವೈದ್ಯ ವಜಾ

08:25 AM May 05, 2020 | Nagendra Trasi |

ಮುಂಬೈ: ಜಾಗತಿಕವಾಗಿ ಕೋವಿಡ್ 19 ವೈರಸ್ ತಡೆಗಟ್ಟಲು ಹರಸಾಹಸ ಪಡುತ್ತಿದ್ದರೆ, ಮತ್ತೊಂದೆಡೆ ಮುಂಬೈಯ ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ದಾಖಲಿಸಲಾಗಿದ್ದ ಕೋವಿಡ್ 19 ಸೋಂಕಿತೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 34 ವರ್ಷದ ವೈದ್ಯನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ.

Advertisement

ಮುಂಬೈ ಸೆಂಟ್ರಲ್ ಪ್ರದೇಶದಲ್ಲಿರುವ ಖಾಸಗಿ ಆಸ್ಪತ್ರೆಗೆ ಈ ಘಟನೆ ನಡೆಯುವ ಹಿಂದಿನ ದಿನವಷ್ಟೇ ಈ ಆರೋಪಿ ವೈದ್ಯ ಆಸ್ಪತ್ರೆಗೆ ಸೇರ್ಪಡೆಗೊಂಡಿದ್ದ. ಐಸಿಯುನಲ್ಲಿದ್ದ ಸೋಂಕಿತೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆಸ್ಪತ್ರೆಯ ಆಡಳಿತ ಮಂಡಳಿ ನೀಡಿದ ದೂರಿನ ಅನ್ವಯ ವೈದ್ಯನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಆದರೆ ಈವರೆಗೂ ವೈದ್ಯನನ್ನು ಬಂಧಿಸಿಲ್ಲ. ಕೋವಿಡ್ 19 ವೈರಸ್ ಸೋಂಕಿತೆಯನ್ನು ಸಂಪರ್ಕಿಸಿದ್ದರಿಂದ ವೈದ್ಯನನ್ನು ಕ್ವಾರೆಂಟೈನ್ ಗೆ ಕಳುಹಿಸಲಾಗಿದೆ. ಕ್ವಾರೆಂಟೈನ್ ಅವಧಿ ಮುಗಿದ ಬಳಿಕ ಬಂಧಿಸಲಾಗುವುದು ಎಂದು ಪೊಲೀಸರು ವಿವರಿಸಿದ್ದಾರೆ.

ಈ ಘಟನೆ ನಡೆಯುವ ಹಿಂದಿನ ದಿನ ವೈದ್ಯ ಆಸ್ಪತ್ರೆಗೆ ಸೇರ್ಪಡೆಗೊಂಡಿದ್ದ, ಇದೀಗ ವೈದ್ಯನನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯ ಮತ್ತು ವೈದ್ಯ ನಿಯಮ ಮೀರಿ ವರ್ತಿಸಿದ ವೈದ್ಯನ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಘಟನೆ ನಂತರ ವೈದ್ಯನನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next