ಮುಂಬಯಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರಿ, ಹಸೀನಾ ಪಾರ್ಕರ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ( ಫೆ.16ರಂದು ಮಂಗಳವಾರ ದಾಳಿ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:75 ಸ್ವಾತಂತ್ರ್ಯಗಳು ಕಳೆದರು ಸಿಗದ ಅನುದಾನ, ಬೊಮ್ಮಾಯಿ ಬಜೆಟ್ ನಲ್ಲಿ ಸಿಗುವುದೇ
ಮುಂಬಯಿಯಲ್ಲಿ ಭೂಗತ ಲೋಕದ ಜತೆ ನಿಕಟ ಸಂಪರ್ಕ ಹೊಂದಿರುವ ಜನರ ನಿವಾಸ, ಕಚೇರಿಗಳ ಮೇಲೂ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದಾಗಿ ಮೂಲಗಳು ಹೇಳಿವೆ. ಇತ್ತೀಚೆಗಷ್ಟೇ ದಾಖಲಾಗಿದ್ದ, ಅಕ್ರಮ ಹಣಕಾಸು ವರ್ಗಾವಣೆಗೆ ಸಂಬಂಧಿಸಿದ ಪ್ರಕರಣವಾಗಿದೆ.
ತಲೆಮರೆಸಿಕೊಂಡಿರುವ ಕೆಲವು ಭೂಗತ ಜಗತ್ತಿನ ಪಾತಕಿಗಳು ಹಾಗೂ ರಾಜಕಾರಣಿಗಳು ಕೂಡಾ ಈ ಪ್ರಕರಣದಲ್ಲಿ ಶಾಮೀಲಾಗಿದ್ದು, ಅವರನ್ನು ವಿಚಾರಣೆ ನಡೆಸಬೇಕಾಗಿದೆ ಎಂದು ಮೂಲಗಳು ತಿಳಿಸಿವೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಹವಾಲಾ ಜಾಲ ಮತ್ತು ನಾರ್ಕೊ ಭಯೋತ್ಪಾದನೆ ಕುರಿತು ಲಭಿಸಿದ ಮಾಹಿತಿಯ ಆಧಾರದ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಗುಪ್ತಚರ ಇಲಾಖೆ ಇತ್ತೀಚೆಗೆ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.