ಮುಂಬೈ: ಸೆಮಿ-ಹೈ ಸ್ಪೀಡ್ ವಂದೇ ಭಾರತ್ಎಕ್ಸ್‌ಪ್ರೆಸ್ ರೈಲಿನ ಪ್ರಯೋಗವನ್ನು ಮಂಗಳವಾರ ಮುಂಬೈ-ಗೋವಾ ಮಾರ್ಗದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಟೆಗೆ 180 ಕಿಮೀ ವೇಗದಲ್ಲಿ ಓಡುವ ಸಾಮರ್ಥ್ಯವಿರುವ ವಂದೇ ಭಾರತ್ ಮುಂಬೈನ ಪ್ಲಾಟ್‌ಫಾರ್ಮ್ ಸಂಖ್ಯೆ 7 ರಿಂದ 5:30 ಕ್ಕೆ ಹೊರಟು ಮಧ್ಯಾಹ್ನ 12.50 ಕ್ಕೆ ಗೋವಾದ ಮಡಗಾಂವ್ ನಿಲ್ದಾಣವನ್ನು ತಲುಪಿತು. ಮಧ್ಯಾಹ್ನ 1.15ರ ಸುಮಾರಿಗೆ ಮಡಗಾಂವ್ ನಿಂದ ಹೊರಟು ರಾತ್ರಿ 8:50ಕ್ಕೆ ಸಿಎಸ್‌ಎಂಟಿ ತಲುಪಿತು.
ಮುಂಬೈ-ಗೋವಾ ಮಾರ್ಗದಲ್ಲಿ ವಂದೇ ಭಾರತ್ ಸೆಮಿ-ಹೈ ಸ್ಪೀಡ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ-ಗೋವಾ ರೈಲು ಮಾರ್ಗದ ವಿದ್ಯುದ್ದೀಕರಣವು ಕಳೆದ ತಿಂಗಳು ಪೂರ್ಣಗೊಂಡಿದ್ದು, ಪರಿಶೀಲನೆಯ ನಂತರ ಹೊಸ ರೈಲು ಸೇವೆಯನ್ನು ಪರಿಚಯಿಸಲಾಗುವುದು ಎಂದು ಹೇಳಿದರು.