ಮುಂಬೈ : ಮುಂಬೈನ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಬಾಂಬ್ ಇಟ್ಟಿರುವ ಕುರಿತು ಬೆದರಿಕೆ ಕರೆಯೊಂದು ಬಂದ ವರದಿಯಾಗಿದೆ.
ಅಪರಿಚಿತ ವ್ಯಕ್ತಿಯೊಬ್ಬ ಹೋಟೆಲ್‌ಗೆ ಕರೆ ಮಾಡಿ, ಹೋಟೆಲ್‌ನ ನಾಲ್ಕು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಹೇಳಿದ ವ್ಯಕ್ತಿ ಬಾಂಬ್ ನಿಷ್ಕ್ರಿಯಗೊಳಿಸಲು 5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಮುಂಬೈನ ಶಹರ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 336, 507 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೆಲವು ದಿನದ ಹಿಂದೆ ಪಾಕಿಸ್ತಾನ ಸಂಖ್ಯೆಯಿಂದ 26/11 ಮಾದರಿಯಲ್ಲಿ ಭಯೋತ್ಪಾದಕ ದಾಳಿ ಮಾಡುವ ಕುರಿತು ಬೆದರಿಕೆ ಕರೆಗಳು ಬಂದಿದ್ದು ಇದೀಗ ಹೋಟೆಲ್ ನಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ತಕ್ಷಣವೇ ಕ್ರೈಂ ಬ್ರಾಂಚ್‌ನ ಮೂರು ತಂಡಗಳನ್ನು ರಚಿಸಿದ್ದು ಜೊತೆಗೆ ತನಿಖೆಗಾಗಿ ಇತರ ರಾಜ್ಯ ಮತ್ತು ಕೇಂದ್ರೀಯ ಸಂಸ್ಥೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ನಗರ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಹೇಳಿದ್ದಾರೆ.
ಇದನ್ನೂ ಓದಿ :ಮಾಂಸಾಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕಬೇಡಿ ಎಂದು ಹೇಳುವ ತಾಕತ್ತು ಬಿಜೆಪಿಗೆ ಇದೆಯೇ ?