Advertisement

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

12:04 AM Mar 19, 2024 | Team Udayavani |

ಮುಂಬಯಿ: ಐದು ಬಾರಿಯ ಐಪಿಎಲ್‌ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಹಾರ್ದಿಕ್‌ ಪಾಂಡ್ಯ ನಾಯಕ ಎನ್ನುವ ವಾಸ್ತವವನ್ನು ಅರಗಿಸಿಕೊಳ್ಳಲು ಮುಂಬೈ ಅಭಿಮಾನಿಗಳಿಗೆ ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ರೋಹಿತ್‌ ಶರ್ಮ ಅವರನ್ನು ನಾಯಕತ್ವದಿಂದ ಕೆಳಗಿಳಿಸಿರುವ ವಿವಾದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಲು ಹಾರ್ದಿಕ್‌ ಪಾಂಡ್ಯ ಮತ್ತು ಮುಂಬೈ ಮುಖ್ಯ ಕೋಚ್‌ ಮಾರ್ಕ್‌ ಬೌಷರ್‌ ನಿರಾಕರಿಸಿದ್ದಾರೆ. ಮೌನಕ್ಕೆ ಶರಣಾಗಿದ್ದಾರೆ.

Advertisement

ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟರ್‌ ಬೌಷರ್‌ ಜತೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಹಾರ್ದಿಕ್‌, ತಂಡದ ನಾಯಕತ್ವ ಬದಲಾವಣೆಗೆ ಸಂಬಂಧಿಸಿ ಕೇಳಲಾದ ಯಾವ ಪ್ರಶ್ನೆಗೂ ಉತ್ತರಿಸಿಲ್ಲ. ಬೌಷರ್‌ ಕೂಡ ಇದಕ್ಕೆ ಪ್ರತಿಕ್ರಿಯಿಸಲು ಹಿಂದೇಟು ಹಾಕಿದರು. ಇದರ ವೀಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕೋಚ್‌ ಬದಲಾವಣೆಯ ಬೆನ್ನಲ್ಲೇ ಜಾಲತಾಣದಲ್ಲಿ ಮುಂಬೈ ಹಿಂಬಾಲಕರ ಸಂಖ್ಯೆ ದಿಢೀರ್‌ ಕುಸಿದಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಹಾರ್ದಿಕ್‌, ನನ್ನಿಂದ ನಿಯಂತ್ರಿಸಲಾಗದ ವಿಚಾರಗಳ ಬಗ್ಗೆ ನಾನು ಹೆಚ್ಚು ಗಮನ ಸಹರಿಸುವುದಿಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next