ಬೆಂಗಳೂರು: ಕಾರಣಾಂತರಗಳಿಂದ ಸ್ಥಗಿತಗೊಂಡಿರುವ ಮುಂಬೈನ ಆಕಾಶವಾಣಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡ ಕಾರ್ಯಕ್ರಮಗಳನ್ನು ತಕ್ಷಣವೇ ಪುನರಾರಂಭಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಮನವಿ ಮಾಡಿದ್ದಾರೆ.
ಈ ಸಂಬಂಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವೇಡ್ಕರ್ ಹಾಗೂ ಪ್ರಸಾರ ಭಾರತಿ ಅಧ್ಯಕ್ಷ ರಿಗೆ
ಪತ್ರ ಬರೆದಿರುವ ರವಿ ಅವರು, ಕನ್ನಡಿಗರ ಒತ್ತಾಸೆಯಂತೆ ಮುಂಬೈನ ಆಕಾಶವಾಣಿಯಲ್ಲಿ ಕಾರ್ಯಕ್ರಮಗಳನ್ನು ಮರುಪ್ರಸಾರ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಕಳೆದ ಏಳು ದಶಕಗಳಿಂದ ಮುಂಬೈ ಆಕಾಶವಾಣಿಯಲ್ಲಿ ಕನ್ನಡ ಕಾರ್ಯಕ್ರಮಗಳು ಪ್ರಸಾರವಾಗುತ್ತಿದ್ದು ಸರಿಸುಮಾರು 25 ಲಕ್ಷಕ್ಕೂ ಹೆಚ್ಚು ಮಂದಿ ಕಾರ್ಯಕ್ರಮ ಆಲಿಸುತ್ತಿದ್ದರು. ಏಕಾಏಕಿ ಕಾರ್ಯಕ್ರಮವನ್ನು ರದ್ದುಪಡಿಸಿರುವುದರಿಂದ ಹಲವರಿಗೆ ಬೇಸರ ತಂದಿದೆ ಎಂದು ಸಚಿವರ ಗಮನಕ್ಕೆ ತಂದಿದ್ದಾರೆ.
ಇದನ್ನೂ ಓದಿ:ಕೊಡೇರಿ ಮೀನು ಹರಾಜು ಪ್ರಕ್ರೀಯೆ ಸಂದರ್ಭ 2 ಗುಂಪುಗಳ ನಡುವೆ ಮಾರಾಮಾರಿ
ದೇಶದ ಪ್ರತಿಯೊಂದು ಭಾಗದಲ್ಲಿ ಸ್ಥಳೀಯ ಜನತೆ ತಮ್ಮ ಭಾಷೆಯಲ್ಲಿ ಆಲಿಸಲು ಸಂವಿಧಾನವೇ ಅವಕಾಶ ಮಾಡಿಕೊಟ್ಟಿದ್ದು, ಇದರಿಂದ ರಾಷ್ಟ್ರದ ಏಕಾಗ್ರತೆಗೆ ಅನಕೂಲವಾಗಲಿದೆ ಎಂದು ಹೇಳಿದೆ.
ಏಕಾಏಕಿ ಕಾರ್ಯಕ್ರಮ ಸ್ಥಗಿತವಾಗಿರುವುದರಿಂದ ಕನ್ನಡದ ಖ್ಯಾತ ಸಾಹಿತಿಗಳಾದ ಬರಗೂರ ರಾಮಚಂದ್ರಪ್ಪ ಮತ್ತಿತರರು ನನ್ನ ಗಮನಕ್ಕೆ ತಂದಿದ್ದಾರೆ. ಆಕಾಶವಾಣಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿರುವುದಕ್ಕೆ ಆಕ್ಷೇಪಿಸಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.