Advertisement

ಮುಂಬಯಿ ಫಿಲ್ಮ್ ಸಿಟಿಯಲ್ಲಿ ಚಿರತೆ ಕಳೇಬರ ಪತ್ತೆ

07:45 PM Sep 18, 2022 | Team Udayavani |

ಮುಂಬಯಿ: ಮುಂಬಯಿ ಫಿಲ್ಮ್ ಸಿಟಿಯಲ್ಲಿ ರವಿವಾರ ಬೆಳಗ್ಗೆ ಚಿರತೆಯೊಂದು ಶವವಾಗಿ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಮೃತ ಚಿರತೆಯ ಶರೀರದ ಮೇಲೆ ಯಾವುದೇ ಗಾಯದ ಗುರುತು ಇರಲಿಲ್ಲ. ಅದನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಸಂಜಯ್‌ ಗಾಂಧಿ ರಾಷ್ಟ್ರೀಯ ಉದ್ಯಾನವನವು ಹಲವಾರು ಚಿರತೆಗಳಿಗೆ ನೆಲೆಯಾಗಿದೆ. ಉಪನಗರ ಗೋರೆಗಾಂವ್‌ನಲ್ಲಿರುವ ಫಿಲ್ಮ್ ಸಿಟಿಯಲ್ಲಿ ಗಂಡು ಚಿರತೆ ಸತ್ತು ಬಿದ್ದಿರುವ ಬಗ್ಗೆ ಅರಣ್ಯ ನಿಯಂತ್ರಣ ಕೊಠಡಿಗೆ ಬೆಳಗ್ಗೆ 10.30 ರ ಸುಮಾರಿಗೆ ಕರೆ ಬಂದಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ತಂಡವು ಸ್ಥಳಕ್ಕೆ ತೆರಳಿದ್ದು, ಚಿರತೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಚಿರತೆಯ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಸಹಾಯವಾಗಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಚಿರತೆ ಸಾವನ್ನಪ್ಪಿರುವ ಬಗ್ಗೆ ಅರಣ್ಯಾಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next