Advertisement
ವಿಮಾನದಲ್ಲಿ 239 ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಣವಾಗಿದ್ದು ಕೂಡಲೇ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.
Related Articles
Advertisement
ಬಾಂಬ್ ಪತ್ತೆಯಾಗಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ:ಏರ್ ಇಂಡಿಯಾ ವಿಮಾನ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ ಬಳಿಕ ಪ್ರಯಾಣಿಕರನ್ನು ಇಳಿಸಿ ಕಾರ್ಯಾಚರಣೆ ನಡೆಸಲಾಯಿತು ಆದರೆ ವಿಮಾನದಲ್ಲಿ ಬಾಂಬ್ನಂತಹ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಂಬ್ ಬೆದರಿಕೆ ವದಂತಿ ಹಬ್ಬಿಸಿದವರ ಹುಡುಕಾಟವೂ ಮುಂದುವರೆದಿದೆ. ಕಳೆದ ಹಲವು ತಿಂಗಳುಗಳಿಂದ ಬಾಂಬ್ ವದಂತಿಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಮೇಲ್ಗಳು ಅಥವಾ ಕರೆಗಳು ಬರುತ್ತಿದ್ದು ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.