ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಪ್ರತಿಕ್ರಿಯೆ ತೋರಿ ಬಂದಿರುವುದನ್ನು ಅಲಕ್ಷಿಸಿದ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರದ ವಹಿವಾಟನ್ನು 57.09 ಅಂಕಗಳ ನಷ್ಟದೊಂದಿಗೆ 29,365.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 17 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 9,194.40 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.ಎಫ್ಎಂಸಿಜಿ, ಹೆಲ್ತ್ ಕೇರ್, ಮೆಟಲ್ ಮತ್ತು ಬ್ಯಾಂಕಿಂಗ್ ಶೇರುಗಳು ಇಂದು ಭರಾಟೆಯ ಮಾರಾಟದ ಒತ್ತಡಕ್ಕೆ ಗುರಿಯಾದವು.
ಇಂದು ಒಟ್ಟು 3,198 ಶೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 1,533 ಶೇರುಗಳು ಮುನ್ನಡೆ ಸಾಧಿಸಿದವು; 1,506 ಶೇರುಗಳು ಹಿನ್ನಡೆಗೆ ಗುರಿಯಾದವು; 159 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಸನ್ ಫಾರ್ಮಾ, ಸಿಪ್ಲಾ, ಐಟಿಸಿ, ಅದಾನಿ ಪೋರ್ಟ್, ಪವರ್‌ಗ್ರಿಡ್ ಶೇರುಗಳು ಟಾಪ್ ಗೆನರ್ ಎನಿಸಿಕೊಂಡವು. ಎಚ್ ಡಿ ಎಫ್ ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಎನ್‌ಟಿಪಿಸಿ, ಏಶ್ಯನ್ ಪೇಂಟ್ಸ್, ಲಾರ್ಸನ್ ಶೇರುಗಳು ಟಾಪ್ ಲೂಸರ್ ಎನಿಸಿದವು.