ಮುಂಬಯಿ: ಮುಂಬಯಿ ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್ ಅವರನ್ನು ಬೇರೆ ಇಲಾಖೆಗೆ ವರ್ಗಾಯಿಸಿದ್ದು, ಹೇಮಂತ್ ನಗರಾಳೆ ಅವರನ್ನು ನೂತನ ಪೊಲೀಸ್ ಕಮಿಷನರ್ ಆಗಿ ಬುಧವಾರ(ಮಾರ್ಚ್) ನೇಮಕ ಮಾಡಲಾಗಿದೆ.
ಇದನ್ನೂ ಓದಿ:ಮಾರ್ಚ್ 30ರಿಂದ ಏ.2: ಕೇರಳದಲ್ಲಿ ಬಿಜೆಪಿಗೆ ಪ್ರಧಾನಿ ಮೋದಿ, ಶಾ ಸ್ಟಾರ್ ಪ್ರಚಾರಕರು
ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಮುಂಬೈಯ ಪೊಲೀಸ್, ಎನ್ ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜೆಯನ್ನು ಬಂಧಿಸಿದ ನಂತರ ಮುಂಬೈ ಪೊಲೀಸ್ ಇಲಾಖೆಯಲ್ಲಿ ಈ ಬೆಳವಣಿಗೆ ನಡೆದಿದೆ.
ಪರಮ್ ವೀರ್ ಸಿಂಗ್ ಅವರನ್ನು ವರ್ಗಾಯಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಇಂದು ಘೋಷಿಸಿತ್ತು. ಪರಮ್ ವೀರ್ ಸಿಂಗ್ ಅವರನ್ನು ಹೋಮ್ ಗಾರ್ಡ್ಸ್ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಅನಿಲ್ ದೇಶಮುಖ್ ತಿಳಿಸಿದ್ದಾರೆ.
ಹೇಮಂತ್ ನಗರಾಳೆ ಮುಂಬೈಯ ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ನಗರಾಳೆ 1987ರ ಬ್ಯಾಚ್ ನ ಮಹಾರಾಷ್ಟ್ರ ಕೇಡರ್ ಅಧಿಕಾರಿಯಾಗಿದ್ದಾರೆ. ಇತ್ತೀಚೆಗಷ್ಟೇ ನಗರಾಳೆಗೆ ಮಹಾರಾಷ್ಟ್ರ ಪೊಲೀಸ್ ಡೈರೆಕ್ಟರ್ ಜನರಲ್ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿತ್ತು.