Advertisement

Mumbai: ಮುಂಬೈನ ಆರು ಸ್ಥಳಗಳಲ್ಲಿ ಬಾಂಬ್‌ ಇಟ್ಟಿರುವುದಾಗಿ ಪೊಲೀಸರಿಗೆ ಬೆದರಿಕೆ ಸಂದೇಶ!

10:43 AM Feb 02, 2024 | Team Udayavani |

ಮುಂಬೈ: ವಾಣಿಜ್ಯ ನಗರಿ ಮುಂಬೈನ ಆರು ಸ್ಥಳಗಳಲ್ಲಿ ಬಾಂಬ್‌ ಗಳನ್ನು ಇಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಶುಕ್ರವಾರ (ಫೆ.02) ಮುಂಬೈ ಟ್ರಾಫಿಕ್‌ ಪೊಲೀಸ್‌ ಕಂಟ್ರೋಲ್‌ ರೂಂಗೆ ಬೆದರಿಕೆ ಸಂದೇಶವನ್ನು ಕಳುಹಿಸಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:Gas Explosion: ಕೀನ್ಯಾದಲ್ಲಿ ಅನಿಲ ಸೋರಿಕೆಯಿಂದ ಬಾರಿ ಸ್ಫೋಟ, 2 ಮೃತ್ಯು, 165 ಮಂದಿಗೆ ಗಾಯ

ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಮತ್ತು ತನಿಖಾ ಸಂಸ್ಥೆಗಳು ಇದೀಗ ಬೆದರಿಕೆ ಸಂದೇಶ ರವಾನಿಸಿದ ವ್ಯಕ್ತಿಯ ಪತ್ತೆ ಹಚ್ಚಲು ಮುಂದಾಗಿರುವುದಾಗಿ ವರದಿ ವಿವರಿಸಿದೆ. ಜನವರಿ ತಿಂಗಳಿನಲ್ಲಿಯೂ ಪ್ರಸಿದ್ಧ ಛತ್ರಪತಿ ಶಿವಾಜಿ ಮಹಾರಾಜ್‌ ಮ್ಯೂಸಿಯಂ ಅನ್ನು ಬಾಂಬ್‌ ಇಟ್ಟು ಸ್ಫೋಟಿಸುವ ಬೆದರಿಕೆಯ ಇ-ಮೇಲ್‌ ಬಂದಿತ್ತು.

ಛತ್ರಪತಿ ಶಿವಾಜಿ ಮಹಾರಾಜ್‌ ಮ್ಯೂಸಿಯಂ, ವರ್ಲಿಯಲ್ಲಿರುವ ನೆಹರು ವಿಜ್ಞಾನ ಕೇಂದ್ರ ಸೇರಿದಂತೆ ಪ್ರಮುಖ ಮ್ಯೂಸಿಯಂಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ ನಲ್ಲಿ ಬೆದರಿಕೆ ಹಾಕಲಾಗಿತ್ತು. ಬಳಿಕ ಪೊಲೀಸರು ಮತ್ತು ಬಾಂಬ್‌ ನಿಷ್ಕ್ರಿಯ ದಳ ಜಂಟಿಯಾಗಿ ತಪಾಸಣೆ ನಡೆಸಿದಾಗ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next