Advertisement

Mumbai; ನಟಿ ಶಿಲ್ಪಾ ಶೆಟ್ಟಿ ಮನೆಯಲ್ಲಿ ಕಳ್ಳತನ: ಇಬ್ಬರ ಬಂಧನ

02:18 PM Jun 15, 2023 | Team Udayavani |

ಮುಂಬಯಿ: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

Advertisement

ಕಳೆದ ವಾರ ಜುಹುದಲ್ಲಿನ ನಟಿಯ ನಿವಾಸದಿಂದ ಕೆಲವು ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಜುಹು ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತನಿಖಾ ತಂಡವು ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next