Advertisement

ಮುಂಬಯಿ: ಶೀಘ್ರದಲ್ಲೇ ನಗರಗಳಲ್ಲಿ ಕಾಣಿಸಿಕೊಳ್ಳಲಿರುವ ಎಲೆಕ್ಟ್ರಿಕ್‌ ಡಬಲ್‌ ಡೆಕ್ಕರ್‌ ಬಸ್‌

05:01 PM Aug 17, 2022 | Team Udayavani |

ಮುಂಬಯಿ: ಮುಂಬಯಿ ನಿವಾಸಿಗರ ಪ್ರಯಾಣಕ್ಕಾಗಿ ಬೆಸ್ಟ್‌ ವತಿಯಿಂದ ಮೊದಲ ಎಲೆಕ್ಟ್ರಿಕ್‌ ಡಬಲ್‌ ಡೆಕ್ಕರ್‌ ಬಸ್‌ ಸಿದ್ಧವಾಗಿದ್ದು, ಶೀಘ್ರದಲ್ಲೇ ಮುಂಬಯಿ ಬೀದಿಗೆ ಇಳಿಯಲಿದೆ. ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಗುರುವಾರ ಕೈಗೊಳ್ಳಲಾಗುವುದು ಎಂದು ಬೆಸ್ಟ್‌ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪ್ರಸ್ತುತ 400 ಕ್ಕೂ ಹೆಚ್ಚು ಸಿಂಗಲ್‌ ಎಲೆಕ್ಟ್ರಿಕ್‌ ಬಸ್‌ಗಳು ಲಭ್ಯವಿದೆ. ಆದರೆ ಈಗ ಮುಂಬಯಿ ರಸ್ತೆಗಳಲ್ಲಿ ಡಬಲ್‌ ಡೆಕ್ಕರ್‌ ಎಲೆಕ್ಟ್ರಿಕ್‌ ಬಸ್‌ಗಳು ಓಡಲಿವೆ. 2028 ರ ವೇಳೆಗೆ ಎಲ್ಲಾ ಬಸ್‌ಗಳನ್ನು ಎಲೆಕ್ಟ್ರಿಕ್‌ ಮಾಡಲು ಉದ್ದೇಶಿಸಲಾಗಿದೆ.

ಈ ಡಬಲ್‌ ಡೆಕ್ಕರ್‌ ಬಸ್‌ಗಲ್ಲಿ ಅಂದಾಜು 78-90 ಪ್ರಯಾಣಿಕರು ಕುಳಿತುಕೊಳ್ಳಬಹುದು. ಈ ಎಲೆಕ್ಟ್ರಿಕ್‌ ಬಸ್‌ಗಳು ಓಡುವ 55 ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಸ್ಟೇಷನ್‌ಗಳನ್ನು ಸಹ ಸ್ಥಾಪಿಸಲಾಗುವುದು ಎಂದು ಬೆಸ್ಟ್‌ ನ ಪ್ರಧಾನ ವ್ಯವಸ್ಥಾಪಕ ಲೋಕೇಶ್‌ ಚಂದ್ರ ಮಾಹಿತಿ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next