ಮುಂಬಯಿ: ಮಧ್ಯ ಮುಂಬೈನ ಕುರ್ಲಾದಲ್ಲಿ ಖಾಲಿ ವಸತಿ ಕಟ್ಟಡದಲ್ಲಿ 20 ವರ್ಷದ ಯುವತಿಯೊಬ್ಬರ ಶವ ಅತ್ಯಾಚಾರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
13 ಅಂತಸ್ತಿನ ಕಟ್ಟಡದ ಟೆರೇಸ್‌ನಲ್ಲಿ ಗುರುವಾರ ಸಂಜೆ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ.
ಕೆಲವು ಹುಡುಗರು ವಿಡಿಯೋ ಚಿತ್ರೀಕರಣಕ್ಕಾಗಿ ಕಟ್ಟಡದ ಟೆರೇಸ್‌ಗೆ ಹೋಗಿದ್ದ ವೇಳೆ ಶವವನ್ನು ಕಂಡು ನಮಗೆ ಮಾಹಿತಿ ನೀಡಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿನೋಬಾ ಭಾವೆ ನಗರ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ಧಾವಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು,ಹತ್ಯೆಯಾಗುವ ಮೊದಲು ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.
ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಈ ಬಗ್ಗೆ ತನಿಖೆ ನಡೆಸಲು ನೆರೆಯ ಪೊಲೀಸ್ ಠಾಣೆಗಳಿಂದ ವಿಶೇಷ ತಂಡಗಳನ್ನು ರಚಿಸಲಾಗಿದೆ . ಸಂತ್ರಸ್ತೆಯ ಗುರುತನ್ನು ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸರು ನಡೆಸುತ್ತಿದ್ದಾರೆ.