Advertisement

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

04:47 PM Oct 08, 2024 | Team Udayavani |

ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಮಂಗಳವಾರ (ಅ.08) ಬಂಧಿಸಿದ್ದಾರೆ.

Advertisement

ಪ್ರಕರಣದ ಎ1 ಆರೋಪಿಯಾಗಿರುವ ಆಯಿಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಪ್ರಕರಣ ಎ5 ಆರೋಪಿ ಶೊಯೆಬ್ ಮತ್ತು ಸಿರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಲಿ ನಾಪತ್ತೆಯಾದ ಬಳಿಕ ಆರೋಪಿ ರೆಹಮತ್ ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿತ್ತು. ಇದೀಗ ಬಂಟ್ವಾಳದ ಕಲ್ಲಡ್ಕ ಬಳಿ ರೆಹಮತ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್ ಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

Advertisement

ಆರೋಪಿಗಳು ಮಮ್ತಾಜ್ ಆಲಿ ಅವರನ್ನು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದರು ಎನ್ನಲಾಗಿದೆ. ಮಮ್ತಾಜ್ ಅವರನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.

ಘಟನೆಗೆ ಸಂಬಂಧಿಸಿದಂತೆ ಆರು ಜನರ ಮೇಲೆ ಕಾವೂರು ಠಾಣೆಯಲ್ಲಿ ಎಪ್ಐಆರ್ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next