ನವದೆಹಲಿ : ಕೋಮು ಸಾಮರಸ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಯೋಜಿಸಿದ್ದ ಕಾಮಿಡಿಯನ್ ಮುನವ್ವರ್ ಫಾರೂಕಿ ಅವರ ಕಾರ್ಯಕ್ರಮಕ್ಕೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಇದೆ ಆಗಸ್ಟ್ 28ರಂದು ದೆಹಲಿಯಲ್ಲಿ ಮುನವ್ವರ್ ಫಾರೂಕಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿತ್ತು ಆದರೆ ಈ ಕಾರ್ಯಕ್ರಮದಿಂದ ಕೋಮು ಸಾಮರಸ್ಯಕ್ಕೆ ಅಡ್ಡಿಯಾಗಬಹುದು ಎಂದು ಕೇಂದ್ರ ಜಿಲ್ಲಾ ಪೊಲೀಸರು ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದರು ಇದನ್ನು ಪರಿಗಣಿಸಿದ ಪೊಲೀಸರು ಆಗಸ್ಟ್ 28ರಂದು ನಡೆಯಬೇಕಿದ್ದ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ.
ಇತ್ತೀಚಿಗೆ ಹೈದರಾಬಾದ್ ನಲ್ಲೂ ಮುನವ್ವರ್ ಫಾರೂಕಿ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮದ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು ಎನ್ನಲಾಗಿದೆ.
ಇದನ್ನೂ ಓದಿ : ಕೋಳಿ ಫಾರಂನಿಂದ 20 ಗ್ರಾಮಗಳಿಗೆ ಸಾಂಕ್ರಾಮಿಕ ರೋಗ : ಗುಳೆಗೆ ಸಿದ್ದರಾದ ರೈತಾಪಿವರ್ಗ