ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಮತ್ತು ಪ್ಲಾಸ್ಟಿಕ್ ಮುಕ್ತ ಜಿಲ್ಲೆ ಮಾಡಲು ಜಿಲ್ಲಾಡಳಿತ ದೃಢ ಸಂಕಲ್ಪ ಮಾಡಿದ್ದು ಚಿಕ್ಕಬಳ್ಳಾಪುರ ನಗರದಲ್ಲಿ ನಗರಸಭೆಯ ಸಿಬ್ಬಂದಿ ಪ್ರತ್ಯೇಕವಾಗಿ ದಾಳಿ ನಡೆಸಿದ್ದಾರೆ.
ನಗರದ ವಿವಿಧಡೆ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿದ ನಗರಸಭೆಯ ಅಧಿಕಾರಿಗಳು 100 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ ಮತ್ತೊಂದಡೆ ಕೋವಿಡ್ ಸೋಂಕು ನಿಯಂತ್ರಿಸಲು ಸಾಮಾಜಿಕ ಅಂತರವನ್ನು ಕಾಯ್ದಕೊಳ್ಳದೆ ಕಡ್ಡಾಯವಾಗಿ ಮಾಸ್ಕ್ ಧರಿಸದೆ ನಿರ್ಲಕ್ಷ್ಯವಹಿಸಿರುವ ನಾಗರಿಕರಿಗೆ ದಂಡ ವಿಧಿಸಿ 18600 ರೂಗಳ ದಂಡ ವಸೂಲಿ ಮಾಡಿ ಶಾಕ್ ನೀಡಿದ್ದಾರೆ.
ಜಿಲ್ಲಾಧಿಕಾರಿ ಆರ್.ಲತಾ ಅವರ ಸೂಚನೆಯ ಮೇರೆಗೆ ಏಕಕಾಲಕ್ಕೆ ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ, ಗೌರಿಬಿದನೂರು, ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನಲ್ಲಿ ನಗರಸಭೆ,ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಮಾಸ್ಕ್ ಹಾಕದೆ ಸಂಚರಿಸುವ ನಾಗರಿಕರಿಗೆ ದಂಡ ವಿಧಿಸುವ ಮೂಲಕ ದಂಡ ವಿಧಿಸಿದ್ದಾರೆ ಮತ್ತೊಂದಡೆ ಚಿಕ್ಕಬಳ್ಳಾಪುರ ನಗರದ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ನಗರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವ ನಾಗರಿಕರಿಗೆ ದಂಡ ವಿಧಿಸಿ 18600 ರೂಗಳ ದಂಡ ವಸೂಲಿ ಮಾಡಿದ್ದಾರೆ.
ನಗರಸಭೆ ಅಧಿಕಾರಿಗಳ ದಿಡೀರ್ ದಾಳಿ: ಚಿಕ್ಕಬಳ್ಳಾಪುರ ನಗರದಲ್ಲಿ ಯಾವುದೇ ಮುನ್ನಸೂಚನೆ ನೀಡದೆ ನಗರಸಭೆಯ ಪರಿಸರ ಅಭಿಯಂತರರಾದ ಶಿವಶಂಕರ್,ಆರೋಗ್ಯ ನಿರೀಕ್ಷಕರಾದ ಶ್ರೀನಾಥ್‍ಬಾಬು,ರೇಖಾ,ಮುಕ್ತಾಂಬ ಮತ್ತು ಸಿಬ್ಬಂದಿ ವಿವಿಧಡೆ ದಾಳಿ ನಡೆಸಿ ಪ್ಲಾಸ್ಟಿಕ್ ಮತ್ತು ಮಾಸ್ಕ್ ಧರಿಸದ ನಾಗರಿಕರಿಗೆ ದಂಡ ವಿಧಿಸಿದ್ದಾರೆ ನಗರಸಭೆಯ ಅಧಿಕಾರಿಗಳ ದಿಡೀರ್ ಕಾರ್ಯಚರಣೆ ನಡೆಸಿ ಶಾಕ್ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು,ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸ್ಯಾನಿಟೈಸರ್ ಹಾಕಿಕೊಳ್ಳಬೇಕೆಂದು ಮನವಿ ಮಾಡಿದರು ಸಹ ಇತ್ತೀಚಿನ ದಿನಗಳಲ್ಲಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯವಹಿಸಿರುವ ವಿಚಾರವನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ದಂಡ ವಿಧಿಸಲು ಸೂಚನೆ ನೀಡಿದ್ದಾರೆ ಹೇಗಾಗಿ ಜಿಲ್ಲಾದ್ಯಂತ ನಗರಸಭೆಯ ವ್ಯಾಪ್ತಿಯಲ್ಲಿ 500,ಪುರಸಭೆ ವ್ಯಾಪ್ತಿಯಲ್ಲಿ 300 ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 200 ಮಂದಿಗೆ ದಂಡ ವಿಧಿಸಲು ನಿರ್ದೇಶನ ನೀಡಿದ್ದು ಜಿಲ್ಲಾದ್ಯಂತ ದಂಡ ವಿಧಿಸುವ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ನಗರಾಭಿವೃಧ್ಧಿ ಯೋಜನಾ ನಿರ್ದೇಶಕ ರೇಣುಕಾ ತಿಳಿಸಿದ್ದಾರೆ.