Advertisement

ವಿಪ್ ಉಲಂಘಿಸಿ ಮತದಾನ : ನಗರಸಭಾ ಸದಸ್ಯರ ಸದಸ್ಯತ್ವ ರದ್ದುಗೊಳಿಸಲು ಆಗ್ರಹ

09:00 PM Jun 09, 2021 | Team Udayavani |

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಪ್ ಉಲಂಘಿಸಿ ಅಡ್ಡಮತದಾನ ಮಾಡಿರುವ ನಗರಸಭಾ ಸದಸ್ಯರನ್ನು ಸದಸ್ಯತ್ವದಿಂದ ಅನರ್ಹಗೊಳಿಸಬೇಕೆಂದು ಚಿಕ್ಕಬಳ್ಳಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಜಯರಾಂ ಒತ್ತಾಯಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು 30-10.2020 ರಂದು ನಡೆದ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಪಕ್ಷದ ಎಲ್ಲಾ ನಗರಸಭಾ ಸದಸ್ಯರಿಗೂ ವಿಪ್ ಜಾರಿಗೊಳಿಸಲಾಗಿತ್ತು ಆದರೇ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾದ ನಗರಸಭಾ ಸದಸ್ಯರು ಪಕ್ಷದಿಂದ ನೀಡಿದ ವಿಪ್ ಉಲಂಘಿಸಿ ಅಡ್ಡಮತದಾನ ಮಾಡಿದ್ದು ಜಿಲ್ಲಾಧಿಕಾರಿಗಳು ಕೂಡಲೇ ಅಡ್ಡಮತದಾನ ಮಾಡಿದ ನಗರಸಭಾ ಸದಸ್ಯರನ್ನು ಸದಸ್ಯತ್ವದಿಂದ ಅನರ್ಹಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ :ಚಿಕ್ಕಬಳ್ಳಾಪುರ :  ಪೊಲೀಸರ ಕಾರ್ಯಾಚರಣೆ, 414 ವಾಹನಗಳ ಜಪ್ತಿ 1 ಲಕ್ಷ ರೂಗಳ ದಂಡ ವಸೂಲಿ

ನಗರಸಭಾ ಸದಸ್ಯರ ವಿರುಧ್ಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದ್ದು ಕಳೆದ 6 ತಿಂಗಳಿಂದ ವಿಚಾರಣೆ ನಡೆಯುತ್ತಿದ್ದು ರಾಜ್ಯದ ರಾಮಲಿಂಗಾಪುರ ಪುರಸಭೆ ಮತ್ತು ಮೈಸೂರು ಮಹಾನಗರ ಪಾಲಿಕೆ ಸದಸ್ಯರನ್ನು ಪಕ್ಷಾಂತರ ಕಾಯ್ದೆಯಡಿ ಸದಸ್ಯತ್ವದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ ಅದೇ ರೀತಿಯಲ್ಲಿ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಪ್ ಉಲಂಘಿಸಿ ಅಡ್ಡಮತದಾನ ಮಾಡಿದ ನಗರಸಭಾ ಸದಸ್ಯರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿ ವಜಾಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next