Advertisement
ತಮ್ಮ ಕಚೇರಿಯಲ್ಲಿ ಗುರುವಾರ ನಡೆದ ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಖಜಾನೆಯ ಉಪ ನಿರ್ದೇಶಕರು ಈ ಸಂಬಂಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ನಗರವನ್ನು ಸ್ವತ್ಛಗೊಳಿಸುವ ಪೌರ ಕಾರ್ಮಿಕರು ಉತ್ತಮ ಆರೋಗ್ಯದಿಂದಿರುವುದು ಮುಖ್ಯ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಜಿಲ್ಲೆಯಲ್ಲಿರುವ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗದಲ್ಲಿ ಪ್ರತೀ ತಿಂಗಳು ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ದುಡಿಯುವ ಎಲ್ಲ ಪೌರಕಾರ್ಮಿಕರಿಗೆ ಮೂಲಸೌಕರ್ಯ, ಸ್ನಾನ ಗೃಹ, ಶೌಚಾಲಯ, ವಿಶ್ರಾಂತಿ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಡಬೇಕು ಎಂದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕ ಅಭಿಷೇಕ್ ಮಾತನಾಡಿ, ವಿಶ್ರಾಂತಿ ಕೊಠಡಿಗೆ ಬೇಕಾದ ಪೀಠೊಪಕರಣಗಳನ್ನು ಖರೀದಿಸಲು ನಗರೋತ್ಥಾನ ಯೋಜನೆಯಡಿ ಅನುದಾನ ಮೀಸಲಿಡಲಾಗುವುದು ಎಂದರು.
Related Articles
Advertisement