Advertisement

ಮುಂಡರಗಿ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ 26ಕ್ಕೆ

04:41 AM May 21, 2020 | Suhan S |

ಮುಂಡರಗಿ: ಪಟ್ಟಣದ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಮಂಡಳಿ ಎರಡನೇ ಅವಧಿ ಮುಕ್ತಾಯವಾಗಿದ್ದು, ಮುಂದಿನ ಅವಧಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೇ 26ರಂದು ಚುನಾವಣೆ ನಿಗದಿಪಡಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Advertisement

ಎಪಿಎಂಸಿಗೆ ಆಯ್ಕೆಯಾದ 14 ಜನ ಸದಸ್ಯರು, ನಾಮನಿರ್ದೇಶಿತ 3 ಜನ ಸದಸ್ಯರುಗಳಿಗೆ ಸೇರಿದಂತೆ ಸದಸ್ಯರೆಲ್ಲರಿಗೂ ತಿಳಿವಳಿಕೆ ಪತ್ರ ಜಾರಿ ಮಾಡಲಾಗಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸದಸ್ಯರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಚುನಾವಣಾ ಧಿಕಾರಿಯಾದ ತಹಶೀಲ್ದಾರ್‌ ಡಾ| ವೆಂಕಟೇಶ ನಾಯಕ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next