Advertisement

ಮುಂಡರಗಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ಧತೆ

05:33 AM Jun 06, 2020 | Suhan S |

ಮುಂಡರಗಿ: ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪೂರ್ವ ಸಿದ್ಧತೆ, ಮುಂಜಾಗ್ರತಾ ಕ್ರಮ ಕೈಕೊಳ್ಳುವ ಕುರಿತು ಡಿಡಿಪಿಐ ಎನ್‌. ಎಚ್‌. ನಾಗೂರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

Advertisement

ಕೋವಿಡ್ ವೈರಸ್‌ ಭೀತಿಯಿಂದ ಮುಂಜಾಗ್ರತಾ ಕ್ರಮವಾಗಿ ವಸತಿ ನಿಲಯದಲ್ಲಿದ್ದವರು, ವಲಸೆ ಬಂದವರಿಗೆ ವಾಸ್ತವ್ಯ ಸ್ಥಳ ಸಮೀಪದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಪರೀಕ್ಷೆ, ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಯ್ದುಕೊಳ್ಳುವುದು ಸೇರಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಡಿಡಿಪಿಐ ಎನ್‌.ಎಚ್‌.ನಾಗೂರ ಹೇಳಿದರು.

ಶಾಲೆಯ ಶಿಕ್ಷಕರು ಪರೀಕ್ಷೆ ಮುಗಿಯುವವರೆಗೂ ಮಕ್ಕಳ ಜೊತೆಗೆ ಸಂಪರ್ಕದಲ್ಲಿರಬೇಕು. ಪರೀಕ್ಷೆಗೆ ಅಣಿಯಾಗುವಂತೆ ಮಾರ್ಗದರ್ಶನ ಮಾಡಿ ಅತ್ಮಸ್ಥೈರ್ಯ ತುಂಬಬೇಕು. ಪರೀಕ್ಷಾ ಕೇಂದ್ರಕ್ಕೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಥರ್ಮಲ್‌ ಸ್ಕ್ರೀನಿಂಗ್‌ ಮಾಡಿ, ಮಾಸ್ಕ್ ವಿತರಿಸಬೇಕು ಎಂದು ಸಲಹೆ ನೀಡಿದರು. ಬಿಇಒ ಜಿ.ಎಸ್‌.ಅಣ್ಣಿಗೇರಿ ಮಾತನಾಡಿ, ತುರ್ತು ಪರಿಸ್ಥಿತಿ ಎದುರಾದರೆ, ಪರೀಕ್ಷಾ ಕೇಂದ್ರಗಳು ಕ್ವಾರಂಟೈನ್‌ ಮಾಡುವ ಪರಿಸ್ಥಿತಿ ಬಂದರೆ ಪರೀûಾ ಕೇಂದ್ರಗಳನ್ನು ಶಿಫ್ಟ್‌ ಮಾಡಲು ಎರಡು ಪರೀಕ್ಷಾ ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ ಎಂದರು. ಆರ್‌.ಎಲ್‌.ಬದಾಮಿ, ಸಿ.ಎಚ್‌.ವಡ್ಡರ, ಬಿ.ವಿ.ನಂದಗಾವಿ ಸೇರಿದಂತೆ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next