Advertisement

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

03:38 PM Dec 31, 2024 | Team Udayavani |

ಮುಂಡಗೋಡ: ಹಾವು ಕಡಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಡಿ.31ರ ಮಂಗಳವಾರ ನಡೆದಿದೆ.

Advertisement

ಪಟ್ಟಣದ ಅಂಗನವಾಡಿಯ ಮಯೂರಿ ಸುರೇಶ ಕುಂಬಳೆಪ್ಪನವರ (5) ಹಾವು ಕಡಿದು ಮೃತಪಟ್ಟ ಬಾಲಕಿ.

ಮಯೂರಿ ಎಂದಿನಂತೆ ಅಂಗನವಾಡಿಗೆ ಹೋಗಿದ್ದ ವೇಳೆ ಮೂತ್ರ ವಿಸರ್ಜನೆಗೆಂದು ಅಂಗನವಾಡಿಯ ಹಿಂಬದಿಯಲ್ಲಿ ತೆರಳಿದಾಗ ಯಾವುದೋ ಹಾವು ಕಡಿದಿದೆ.

ಬಾಲಕಿ ತಕ್ಷಣ, ಕಾಲಿಗೆ ಹಾವು ಕಡಿತು ಎಂದು ಅಳುತ್ತಾ ಓಡಿ ಬಂದಿದ್ದಾಳೆ. ಈ ವೇಳೆ ಅಲ್ಲೆ ಇದ್ದ ಸ್ಥಳೀಯರು ವಿಷ ಏರದಂತೆ ಸೆಣಬು ಕಟ್ಟಿಕೊಂಡು ಆಟೋದಲ್ಲಿ ಕೂಡಲೇ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

Advertisement

ಮುಗಿಲು ಮುಟ್ಟಿದ ಕುಟುಂಬದ ಆಕ್ರಂದನ: ಸುರೇಶ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು. ಮೃತ ಮಯೂರಿ ಕಿರಿಯವಳು. ಬಾಲಕಿಗೆ ಹಾವು ಕಡಿದು ಮೃತಪಟ್ಟಿದ್ದಾಳೆ ಎಂಬ ಸುದ್ದಿ ಕೇಳಿ ಕುಟುಂಬವರ ಆಕ್ರಂದನ ಮುಗಿಲು ಮುಟ್ಟಿದೆ.

ಪೊಲೀಸರು ಭೇಟಿ: ವಿಷಯ ತಿಳಿದು ಅಂಗನವಾಡಿ ಕೇಂದ್ರಕ್ಕೆ ಸಿಪಿಐ ರಂಗನಾಥ ನೀಲಮ್ಮನವರ ಭೇಟಿ ನೀಡಿ ಕಾರ್ಯಕರ್ತೆ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದು ಮೃತ ಬಾಲಕಿಯ ಮನೆಗೆ ಭೇಟಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಿಕಿ  ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next