Advertisement

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

10:32 PM Sep 16, 2024 | Team Udayavani |

ಬೆಂಗಳೂರು: ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಶಾಸಕ ಮುನಿರತ್ನ ನೀಡಿರುವ ಹೇಳಿಕೆಗೆ ಆ ಸಮುದಾಯದ ಕಾಂಗ್ರೆಸ್‌ ನಾಯಕರು ರೊಚ್ಚಿಗೆದ್ದು ಅದಕ್ಕಾಗಿ ಜಾತಿ ನಿಂದನೆ ಮಾಡಿರುವ ಶಾಸಕ ಮುನಿರತ್ನ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಒಕ್ಕಲಿಗ ಸಮುದಾಯದ ಸಚಿವರಾದ ಚಲುವರಾಯಸ್ವಾಮಿ, ಎಂ.ಸಿ ಸುಧಾಕರ್‌, ಶಾಸಕರು ಮಾಗಡಿ ಶಾಸಕ ಬಾಲಕೃಷ್ಣ, ಕುಣಿಗಲ್‌ ಶಾಸಕ ರಂಗನಾಥ್‌, ವಿಧಾನಪರಿಷತ್‌ ಸದಸ್ಯರಾದ ರವಿ, ಪುಟ್ಟಣ್ಣ ಮತ್ತಿತರರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಿದ್ದಾರೆ.

Advertisement

ನಗರದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಭೇಟಿಯಾದ ಒಕ್ಕಲಿಗ ಸಮುದಾಯದ ನಾಯಕರಲ್ಲಿ ಒಬ್ಬರಾದ ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಬಿಜೆಪಿ ಶಾಸಕ ಮುನಿರತ್ನ, ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಏನು ಮಾತನಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಕುಮಾರಸ್ವಾಮಿ ಯಾವ್ಯಾವುದೋ ವಿಚಾರ ಮಾತನಾಡುತ್ತಾರೆ. ಬದ್ಧತೆ ಇದ್ದರೆ, ಈ ವಿಚಾರ (ಮುನಿರತ್ನ ಹೇಳಿಕೆ)ಕ್ಕೆ ಉತ್ತರ ಕೊಡಲು ಹೇಳಿ. ಒಕ್ಕಲಿಗ ಸಮುದಾಯದ ನಾಯಕರೇ ಆದ ಅಶೋಕ್‌ ಮತ್ತು ಸಿ.ಟಿ. ರವಿ ಈ ಶಾಸಕನನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಒಕ್ಕಲಿಗ ಹೆಣ್ಣುಮಗಳನ್ನು ಮಲಗಿಸಿ ಅಂತಾನಲ್ಲ ಅವನನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತಾರೆ?’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ಮಾತನಾಡಿ ಮುನಿರತ್ನ ಮಾತನಾಡಿದ್ದು ಎನ್ನಲಾದ ಆಡಿಯೋದಿಂದ ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿ ಸಮುದಾಯದ ಜನರಿಗೆ ತುಂಬಾ ನೋವಾಗಿದೆ ಎಂದು ಹೇಳಿದರು. ಶಾಸಕ ಮುನಿರತ್ನ ವಿರುದ್ಧ  ಎಲ್ಲ ಜಿಲ್ಲೆಗಳಲ್ಲೂ ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್‌ ಪಕ್ಷದಿಂದಲೂ ಸೂಚನೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next