Advertisement

ಮುನಿರತ್ನ, ವಿಶ್ವನಾಥ್ ಇಬ್ಬರಿಗೂ ಉನ್ನತ ಸ್ಥಾನಮಾನ ಸಿಗಲಿದೆ: ನಾರಾಯಣಗೌಡ

04:13 PM Jan 14, 2021 | Team Udayavani |

ಮಂಡ್ಯ: ಬಿಜೆಪಿ ಸೇರ್ಪಡೆಗೊಂಡಿದ್ದ 17 ಜನರ ಪೈಕಿ ವಿಶ್ವನಾಥ್ ಹಾಗೂ ಮುನಿರತ್ನ ಅವರಿಗೂ ಶೀಘ್ರ ಉನ್ನತ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಸ್ಪಷ್ಟಪಡಿಸಿದರು.

Advertisement

ಸಂಕ್ರಾoತಿ ಹಬ್ಬದ ಅಂಗವಾಗಿ ನಗರದ ಹೊಸಹಳ್ಳಿ ಶನೇಶ್ಚರ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್ ಅವರು ನಮ್ಮ ಗುರುಗಳು. ಅವರಿಗೂ ಸಚಿವ ಸ್ಥಾನ ನೀಡಬೇಕು ಎಂದು ನಾನೂ ಸಹ ಮುಖ್ಯಮಂತ್ರಿಗೆ ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.

ಪಕ್ಷದಲ್ಲಿ ಯಾವ ಬಂಡಾಯವೂ ಇಲ್ಲ. ಶಾಸಕ ಯತ್ನಾಳ್ ಅವರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಎಲ್ಲರಿಗೂ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ. ಅದಕ್ಕೂ ಇತಿ ಮಿತಿಗಳಿರುತ್ತವೆ. ಈಗಾಗಲೇ ಮುಖ್ಯಮಂತ್ರಿಗಳು ಎಲ್ಲ ಶಾಸಕರೊಂದಿಗೂ ಮಾತನಾಡುತ್ತಿದ್ದಾರೆ. ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಕೆಲವರಿಗೆ ನಿರಾಶೆ, ಆಕ್ರೋಶ ಆಗುವುದು ಸಹಜ. ಭಿನ್ನಾಭಿಪ್ರಾಯಗಳು ಬರುತ್ತವೆ. ಶೀಘ್ರ ಎಲ್ಲವೂ ಸರಿ ಹೋಗಲಿದೆ ಎಂದು ಹೇಳಿದರು.

ಇದನ್ನೂ ಓದಿ:ಯೋಗೇಶ್ವರ್ ಒಂಬತ್ತು ಕೋಟಿ ರೂ. ಸಾಲ ಮಾಡಿಕೊಂಡು ನಮ್ಮನ್ನು ಒಗ್ಗೂಡಿಸಿದ್ದರು: ಜಾರಕಿಹೊಳಿ

ಸಿಡಿ ವಿಚಾರ ನನಗೆ ಗೊತ್ತಿಲ್ಲ. ಪಕ್ಷದಲ್ಲಿ ಅಸಮಾಧಾನವಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ನೇತೃತ್ವದ ಉತ್ತಮ ಸರ್ಕಾರ ಆಡಳಿತ ನಡೆಸುತ್ತಿದೆ. ಶೀಘ್ರ ಎಲ್ಲವೂ ಸರಿ ಹೋಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

ಪಂಚಮಸಾಲಿ ಸ್ವಾಮೀಜಿ ಪಾದಯಾತ್ರೆ ಕೈಗೊಂಡಿರುವುದು ಸರಿಯಲ್ಲ. ಪ್ರತಿಭಟನೆ ಮಾಡುವುದರಿಂದ ಏನೂ ಪ್ರಯೋಜನವಾಗುವುದಿಲ್ಲ. ಸರ್ಕಾರ ಏನು ತಪ್ಪು ಮಾಡಿದೆ ಎಂದು ಈ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಎಲ್ಲರೂ ಸರ್ಕಾರದ ಜತೆಗೆ ಕೈಜೋಡಿಸಬೇಕು. ಅದು ಬಿಟ್ಟು ಪ್ರತಿಭಟನೆಯಂಥ ಹಾದಿ ಹಿಡಿಯಬಾರದು ಎಂದರು.

ಪತ್ನಿ ದೇವಕಿ ನಾರಾಯಣಗೌಡ, ನಗರಸಭಾಧ್ಯಕ್ಷ ಎಚ್.ಎಸ್.ಮಂಜು, ಹೊಸಹಳ್ಳಿ ಶಿವು, ನಾಗೇಶ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next