ಬೆಂಗಳೂರು : ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮುನಿರತ್ನ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಕುರಿತು ಮಾಜಿ ಶಾಸಕರೇ ತಮ್ಮ ಫೇಸ್ ಬುಕ್ ಖಾತೆಯಲ್ಲಿ ತನಗೂ ಕೋವಿಡ್ ಸೋಂಕು ದೃಢಪಟ್ಟಿರುವ ಕುರಿತು ಹೇಳಿಕೊಂಡಿದ್ದಾರೆ.
ಇಂದು ಕೋವಿಡ್ ಪರಿಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ, ಕ್ಷೇಮವಾಗಿ ಬಂದರೆ ನಿಮ್ಮ ಸೇವೆ ಇಲ್ಲದಿದ್ದರೆ ಕ್ಷಮಿಸಿ ಬಿಡಿ ಎಂದು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಬೆಂಗಳೂರಿನಂತಹ ಮಹಾನಗರಿಯಲ್ಲಿ ದಿನವೊಂದಕ್ಕೆ ಎರಡು ಸಾವಿರ ಪ್ರಕರಣಗಳು ಪತ್ತೆಯಾಗುತ್ತಿದೆ.
ಕಳೆದ ಕೆಲವು ದಿನಗಳ ಹಿಂದೆ ಕೆಲವು ಸಚಿವರು ಹಾಗೂ ಶಾಸಕರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು.