Advertisement

ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಭೀಕರ ಕೊಲೆ

09:06 PM Feb 06, 2021 | Team Udayavani |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪೋಲಿಸ್ ಠಾಣಾ ವ್ಯಾಪ್ತಿಯ ಬೋಗೇನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತಲೆ ಹಿಂಭಾಗದಲ್ಲಿ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಸಂಭವಿಸಿದೆ.

Advertisement

ನರಸಿಂಹಪ್ಪ(45) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ ದುಷ್ಕರ್ಮಿಗಳು ದ್ವಿಚಕ್ರ ವಾಹನವನ್ನು ಹಿಂಬಾಳಿಸಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕೊಲೆಗೀಡಾದ ನರಸಿಂಹಪ್ಪನವರ ಮೃತದೇಹ ದ್ವಿಚಕ್ರ ವಾಹನದ ಮೇಲೆ ಬಿದ್ದಿದ್ದು ತಲೆಯ ಹಿಂಭಾಗದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ ನರಸಿಂಹಪ್ಪ ಎಂಬುವರನ್ನು ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎಂಬುದರ ಕುರಿತು ಪೋಲಿಸರು ತನಿಖೆ ನಡೆಸುತ್ತಿದ್ದಾರೆ ಘಟನಾ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್‍ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ:‘ಆ ದೇವರಿಂದಲೂ ನನ್ನನ್ನು ಹಿಡಿಯಲಾಗುವುದಿಲ್ಲ’ ಎಂದ ಆರೋಪಿಯನ್ನು ಜೈಲಿಗಟ್ಟಿದ ಪೊಲೀಸರು

Advertisement

Udayavani is now on Telegram. Click here to join our channel and stay updated with the latest news.

Next