Advertisement

ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಗಳ ಬಂಧನ

10:36 PM Feb 19, 2023 | Team Udayavani |

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲದಲ್ಲಿ ಕ್ರಿಕೆಟ್‌ ಟೂರ್ನಿ ನಡೆಯುತ್ತಿದ್ದ ವೇಳೆ ಇಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ ಪ್ರಕರಣದ ಇಬ್ಬರು ಆರೋಪಿಗಳನ್ನು ಗುಂಡು ಹಾರಿಸಿ ಬಂಧಿಸಲಾಗಿದೆ.

Advertisement

ಆರೋಪಿಗಳನ್ನು ಬಂಧಿಸುವ ಸಂದರ್ಭ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ವಿನಯ್‌ ಹಾಗೂ ತ್ರಿಮೂರ್ತಿ ಎಂಬವರ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಆರೋಪಿಗಳ ಇರವಿನ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಹರೀಶ್‌ ಕುಮಾರ್‌, ದೊಡ್ಡಬೆಳವಂಗಲ ಪೊಲೀಸ್‌ ಇನ್‌ಸ್ಪೆಕ್ಟರ್‌ ಹರೀಶ್‌ ಹಾಗೂ ಸಿಬಂದಿ ತೆರಳಿದ್ದರು. ಈ ವೇಳೆ ಆರೋಪಿಗಳು ಪೊಲೀಸ್‌ ಸಿಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಆಗ ಆರೋಪಿಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಆರೋಪಿಗಳು ಹಾಗೂ ಪೊಲೀಸ್‌ ಸಿಬಂದಿ ಯನ್ನು ನಗರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ರಿಕೆಟ್‌ ಆಟದ ವಿಚಾರಕ್ಕೆ ಸಂಬಂಧಿಸಿ ದೊಡ್ಡಬೆಳವಂಗಲ ಬಸ್‌ ನಿಲ್ದಾಣದ ಬಳಿ ಶುಕ್ರವಾರ ಭರತ್‌ ಕುಮಾರ್‌, ಪ್ರತೀಕ್‌ ಎಂಬಿಬ್ಬರನ್ನು ಇರಿದು ಹತ್ಯೆ ಮಾಡಲಾಗಿತ್ತು. ಪ್ರಕರಣದ ಐವರು ಆರೋಪಿಗಳ ಪೈಕಿ ಅನಿಲ್‌, ಕೋರಿ, ದೀಪು ತಲೆಮರೆಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next